Homeಅಂತರಾಷ್ಟ್ರೀಯಅಭಿಜಿತ್ ಬ್ಯಾನರ್ಜಿ, ಎಸ್ತರ್ ಡುಫ್ಲೋ ಮತ್ತು ಮೈಕೆಲ್ ಕ್ರೆಮ್ಮರ್ ಅವರಿಗೆ ನೊಬೆಲ್ ಪ್ರಶಸ್ತಿ ಪ್ರಧಾನ

ಅಭಿಜಿತ್ ಬ್ಯಾನರ್ಜಿ, ಎಸ್ತರ್ ಡುಫ್ಲೋ ಮತ್ತು ಮೈಕೆಲ್ ಕ್ರೆಮ್ಮರ್ ಅವರಿಗೆ ನೊಬೆಲ್ ಪ್ರಶಸ್ತಿ ಪ್ರಧಾನ

ಜಾಗತಿಕ ಬಡತನವನ್ನು ಹೋಗಲಾಡಿಸುವ ಪ್ರಾಯೋಗಿಕ ವಿಧಾನಕ್ಕಾಗಿ ಈ ಮೂವರಿಗೆ 2019ರ ಅರ್ಥಶಾಸ್ತ್ರದ ನೊಬೆಲ್ ಪ್ರಶಸ್ತಿ ನೀಡಲಾಯಿತು.

- Advertisement -
- Advertisement -

ಸ್ಟಾಕ್‌ಹೊಮ್‌ನ ಓಸ್ಲೋದಲ್ಲಿ ಬುಧವಾರ ನಡೆದ ಸಮಾರಂಭದಲ್ಲಿ ಭಾರತೀಯ ಅರ್ಥಶಾಸ್ತ್ರಜ್ಞ ಅಭಿಜಿತ್ ಬ್ಯಾನರ್ಜಿ, ಅವರ ಪತ್ನಿ ಎಸ್ತರ್ ಡುಫ್ಲೋ ಮತ್ತು ಸಹ ಅರ್ಥಶಾಸ್ತ್ರಜ್ಞ ಮೈಕೆಲ್ ಕ್ರೆಮ್ಮರ್ ಅವರಿಗೆ ಅರ್ಥಶಾಸ್ತ್ರದ ನೊಬೆಲ್ ಪ್ರಶಸ್ತಿ ಪ್ರಧಾನ ಮಾಡಲಾಯಿತು.

ಜಾಗತಿಕ ಬಡತನವನ್ನು ಹೋಗಲಾಡಿಸುವ ಪ್ರಾಯೋಗಿಕ ವಿಧಾನಕ್ಕಾಗಿ ಈ ಮೂವರಿಗೆ 2019ರ ಅರ್ಥಶಾಸ್ತ್ರದ ನೊಬೆಲ್ ಪ್ರಶಸ್ತಿ ನೀಡಲಾಯಿತು.

ಬ್ಯಾನರ್ಜಿ ಧೋತಿ ಮತ್ತು ಬಂದಗಲಾ ಜಾಕೆಟ್ (ಸಾಂಪ್ರದಾಯಿಕ ಭಾರತೀಯ ಉಡುಪು) ಧರಿಸಿದ್ದರೆ, ಪತ್ನಿ ಡುಫ್ಲೋ ಈ ಸಂದರ್ಭಕ್ಕಾಗಿ ನೀಲಿ ಸೀರೆಯನ್ನು ಆರಿಸಿಕೊಂಡರು. ಕ್ರೆಮ್ಮರ್ ಅವರು ಸೂಟ್‌ ಧರಿಸಿ ಮೂವರು ಗಮನ ಸೆಳೆದರು.

ಅಮರ್ತ್ಯ ಸೇನ್ ನಂತರ ಅರ್ಥಶಾಸ್ತ್ರಕ್ಕೆ ನೊಬೆಲ್ ಪ್ರಶಸ್ತಿ ಪಡೆದ ಎರಡನೇ ಭಾರತೀಯ ಅಭಿಜಿತ್‌ ಬ್ಯಾನರ್ಜಿ. ಫೆಬ್ರವರಿ 21, 1961 ರಂದು ಜನಿಸಿದ ಬ್ಯಾನರ್ಜಿ ಅವರು ಕೋಲ್ಕತ್ತಾದ ಪ್ರೆಸಿಡೆನ್ಸಿ ಕಾಲೇಜು ಮತ್ತು ನವದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದಲ್ಲಿ ಶಿಕ್ಷಣ ಪಡೆದರು, ಅಲ್ಲಿಂದ ಅರ್ಥಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆದರು. ಅವರು 1988 ರಲ್ಲಿ ಹಾರ್ವರ್ಡ್‌ನಲ್ಲಿ ಡಾಕ್ಟರೇಟ್ ಅಧ್ಯಯನವನ್ನು ಪೂರ್ಣಗೊಳಿಸಿದರು.

ಈ ಡಾಕ್ಟರೇಟ್ ಪ್ರಬಂಧವಾದ ಟೈಲ್ ಎಸ್ಸೇಸ್ ಇನ್ ಇನ್ಫರ್ಮೇಷನ್ ಎಕನಾಮಿಕ್ಸ್ ಮತ್ತು ಆರ್ಥಿಕ ಅಭಿವೃದ್ಧಿ, ಮಾಹಿತಿ ಸಿದ್ಧಾಂತ, ಆದಾಯ ವಿತರಣಾ ಸಿದ್ಧಾಂತ ಮತ್ತು ಸ್ಥೂಲ ಅರ್ಥಶಾಸ್ತ್ರ ಇವು ಅವರ ಆಸಕ್ತಿಯ ಕ್ಷೇತ್ರಗಳಾಗಿವೆ.

ಮ್ಯಾಸಚೂಸೆಟ್ಸ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಎಂಐಟಿ) ಗೆ ತೆರಳುವ ಮೊದಲು ಬ್ಯಾನರ್ಜಿ ಹಾರ್ವರ್ಡ್ ಮತ್ತು ಪ್ರಿನ್ಸ್‌ಟನ್‌ನಲ್ಲಿ ಬೋಧಿಸಿದರು. ಅವರು ಪ್ರಸ್ತುತ ಎಂಐಟಿಯಲ್ಲಿ ಫೋರ್ಡ್ ಫೌಂಡೇಶನ್ ಇಂಟರ್ನ್ಯಾಷನಲ್ ಎಕನಾಮಿಕ್ಸ್ ಪ್ರೊಫೆಸರ್ ಆಗಿದ್ದಾರೆ.

ಅವರು ಹಲವಾರು ಲೇಖನಗಳು ಸೇರಿದಂತೆ ಪೂರ್‌ ಎಕನಾಮಿಕ್ಸ್‌ ಪುಸ್ತಕ ಬರೆದಿದ್ದು, ಇದು ವರ್ಷದ ಗೋಲ್ಡ್ಮನ್ ಸ್ಯಾಚ್ಸ್ ಬಿಸಿನೆಸ್ ಬುಕ್ ಪ್ರಶಸ್ತಿಯನ್ನು ಗೆದ್ದುಕೊಂಡಿತು. ಅವರು ಇನ್ನೂ ಮೂರು ಪುಸ್ತಕಗಳ ಸಂಪಾದಕರಾಗಿದ್ದಾರೆ ಮತ್ತು ಎರಡು ಸಾಕ್ಷ್ಯಚಿತ್ರಗಳನ್ನು ನಿರ್ದೇಶಿಸಿದ್ದಾರೆ.

ಅವರು 2015 ರ ನಂತರದ ಅಭಿವೃದ್ಧಿ ಕಾರ್ಯಸೂಚಿಯಲ್ಲಿ ಯುಎನ್ ಸೆಕ್ರೆಟರಿ ಜನರಲ್ ಅವರ ಉನ್ನತ ಮಟ್ಟದ ವ್ಯಕ್ತಿಗಳ ಸಮಿತಿಯಲ್ಲೂ ಸೇವೆ ಸಲ್ಲಿಸಿದರು. ಅಭಿಜಿತ್ ಬ್ಯಾನರ್ಜಿ ಎಸ್ತರ್ ಡುಫ್ಲೋ ಅವರನ್ನು ವಿವಾಹವಾದರು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

FACT CHECK : ಸಿದ್ದರಾಮಯ್ಯ ಸರ್ಕಾರ ಮುಸ್ಲಿಮರನ್ನು ಒಬಿಸಿ ಪಟ್ಟಿಗೆ ಸೇರಿಸಿದ್ದು ನಿಜಾನಾ?

0
ಕರ್ನಾಟಕದಲ್ಲಿ ಮುಸ್ಲಿಮರನ್ನು ಹಿಂದುಳಿದ ವರ್ಗಕ್ಕೆ ಸೇರಿಸುವ ಮೂಲಕ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಹಿಂದುಳಿದ ವರ್ಗಗಳ 36 ಜಾತಿಗಳಿಗೆ ಅನ್ಯಾಯ ಮಾಡಿದೆ ಎಂದು ಬಿಜೆಪಿ ಆರೋಪಿಸಿದೆ. ಸಿದ್ದರಾಮಯ್ಯ ಸರ್ಕಾರ ಹಿಂದುಳಿದ ವರ್ಗಗಳಿಗೆ...