Homeಚಳವಳಿಅಂಬೇಡ್ಕರ್‌ ಕುರಿತ ವಿವಾದಾತ್ಮಕ ಸುತ್ತೋಲೆ ಖಂಡಿಸಿ ಪ್ರತಿಭಟನೆ

ಅಂಬೇಡ್ಕರ್‌ ಕುರಿತ ವಿವಾದಾತ್ಮಕ ಸುತ್ತೋಲೆ ಖಂಡಿಸಿ ಪ್ರತಿಭಟನೆ

- Advertisement -
- Advertisement -

ಸಂವಿಧಾನ ದಿನದ ಅಭಿಯಾನದ ಅಂಗವಾಗಿ ಸಿಎಂಸಿಎ ಸಿದ್ದಪಡಿಸಿದ ಕೈಪಿಡಿಯಲ್ಲಿ ಅಂಬೇಂಡ್ಕರ್ ಅವರೊಬ್ಬರೇ ಸಂವಿಧಾನ ರಚಿಸಿಲ್ಲ ಎಂಬ ವಿವಾದಾತ್ಮಕ ಹೇಳಿಕೆ ಪ್ರಕಟಿಸಿದನ್ನು ವಿರೋಧಿಸಿ ಮೈಸೂರು ಮತ್ತು ಕೊರಟಗೆರೆಯಲ್ಲಿ ಭಾರೀ ಪ್ರತಿಭಟನೆಗಳು ನಡೆದಿವೆ. ಈ ಕೂಡಲೇ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ. ಉಮಾಶಂಕರ್‌ರವರನ್ನು ವಜಾಗೊಳಿಸಬೇಕು ಮತ್ತು ಶಿಕ್ಷಣ ಸಚಿವರು ರಾಜಿನಾಮೆ ನೀಡಬೇಕೆಂದು ಒತ್ತಾಯ ಕೇಳಿಬಂದಿದೆ.

ಸಂವಿಧಾನ ಅಂಬೇಡ್ಕರ್ ಒಬ್ಬರೇ ಬರೆದಿಲ್ಲ ಎನ್ನುವ ಮೂಲಕ ಅಂಬೇಡ್ಕರ್ ಗೆ ಅವಮಾನಿಸುವಂತ ಸುತ್ತೋಲೆ ಹೊರಡಿಸಿದ್ದನ್ನು ವಿರುದ್ಧ ಮೈಸೂರು ವಿಶ್ವವಿದ್ಯಾಲಯ ಮಾನಸಗಂಗೋತ್ರಿಯಲ್ಲಿ ಸಂಶೋಧಕರು, ವಿದ್ಯಾರ್ಥಿಗಳು ಸೇರಿ ಪ್ರತಿಭಟನೆ ನಡೆಸಿದರು.

ಇದೇ ಸಂದರ್ಭದಲ್ಲಿ ಶುಲ್ಕ ಹೆಚ್ಚಳದ ವಿರುದ್ಧ ಹೋರಾಟ ನಿರತ ಜೆ.ಎನ್.ಯು ವಿ.ವಿಯ ವಿದ್ಯಾರ್ಥಿಗಳ ಮೇಲೆ ಮಾಡಿರುವ ಹಲ್ಲೆ ಖಂಡಿಸಿ ವಿದ್ಯಾರ್ಥಿಗಳಿಗೆ ಬೆಂಬಲ ನೀಡಲಾಯಿತು.

ಇನ್ನು ಇದೇ ವಿಷಯಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ದ ಕೊರಟಗೆರೆ ತಾಲೂಕು ಕಛೇರಿಯ ಮುಂದೆ ಪ್ರತಿಭಟನೆ ನಾಗರಿಕರು ನಡೆಸಿದರು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

LEAVE A REPLY

Please enter your comment!
Please enter your name here

- Advertisment -

Must Read

FACT CHECK : ಸಿದ್ದರಾಮಯ್ಯ ಸರ್ಕಾರ ಮುಸ್ಲಿಮರನ್ನು ಒಬಿಸಿ ಪಟ್ಟಿಗೆ ಸೇರಿಸಿದ್ದು ನಿಜಾನಾ?

0
ಕರ್ನಾಟಕದಲ್ಲಿ ಮುಸ್ಲಿಮರನ್ನು ಹಿಂದುಳಿದ ವರ್ಗಕ್ಕೆ ಸೇರಿಸುವ ಮೂಲಕ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಹಿಂದುಳಿದ ವರ್ಗಗಳ 36 ಜಾತಿಗಳಿಗೆ ಅನ್ಯಾಯ ಮಾಡಿದೆ ಎಂದು ಬಿಜೆಪಿ ಆರೋಪಿಸಿದೆ. ಸಿದ್ದರಾಮಯ್ಯ ಸರ್ಕಾರ ಹಿಂದುಳಿದ ವರ್ಗಗಳಿಗೆ...