Homeಚಳವಳಿನೀ ಹೋದ ಮರುದಿನ, ಮೊದಲ್ಹಂಗೆ ನಮ್‌ ಬದುಕು ಆಗ್ಯಾದೋ ಬಾಬಾಸಾಹೇಬ... ಹಾಡು ಬರೆದ ಸಾಹಿತಿ ಚನ್ನಣ್ಣ...

ನೀ ಹೋದ ಮರುದಿನ, ಮೊದಲ್ಹಂಗೆ ನಮ್‌ ಬದುಕು ಆಗ್ಯಾದೋ ಬಾಬಾಸಾಹೇಬ… ಹಾಡು ಬರೆದ ಸಾಹಿತಿ ಚನ್ನಣ್ಣ ವಾಲೀಕಾರ ಇನ್ನಿಲ್ಲ..

- Advertisement -
- Advertisement -

ಹಿರಿಯ ಬಂಡಾಯ ಸಾಹಿತಿ, ಹೋರಾಟದ ದನಿ ಚನ್ನಣ್ಣ ವಾಲೀಕಾರರವರು ತೀವ್ರ ಅನಾರೋಗ್ಯದ ಕಾರಣಕ್ಕಾಗಿ ಭಾನುವಾರ ರಾತ್ರಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಎರಡು ವರ್ಷದಿಂದಲೂ ಪಿತ್ತಜನಕಾಂಗದ ಕ್ಯಾನ್ಸರ್‌ ಸೋಂಕಿನಿಂದ ಬಳಲುತ್ತಿದ್ದ ಅವರು ಚಿಕಿತ್ಸೆಗೆ ಸರಿಯಾಗಿ ಸ್ಪಂದಿಸುತ್ತಿರಲಿಲ್ಲ. ಹಾಗಾಗಿ ಕ್ಯಾನ್ಸರ್‌ ದೇಹದ ಇತರ ಭಾಗಗಳಿಗೂ ‍ಹರಡಿದ ಕಾರಣದಿಂದಾಗಿ ಇಹಲೋಕ ತ್ಯಜಿಸಬೇಕಾಗಿ ಬಂದಿದೆ.

1943ರ ಏಪ್ರಿಲ್‌ 6ರಂದು ಕಲಬುರ್ಗಿ ಜಿಲ್ಲೆಯ ಚಿತ್ತಾಪುರ ತಾಲ್ಲೂಕಿನ ಶಂಕರವಾಡಿ ಗ್ರಾಮದಲ್ಲಿ ಅವರು ಜನಿಸಿದ ಅವರು, ಪ್ರೌಢಶಾಲೆ ಶಿಕ್ಷಕರಾಗಿ, ಕಾಲೇಜು ಉಪನ್ಯಾಸಕರಾಗಿ, ಗುಲಬರ್ಗ ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಸಂಸ್ಥೆಯಲ್ಲಿ ಪ್ರವಾಚಕರಾಗಿ, ಮಾರ್ಗದರ್ಶಕರಾಗಿ ಸೇವೆ ಸಲ್ಲಿಸಿದ್ದಾರೆ. ಆನಂತರ ಹಲವಾರು ಹೋರಾಟಗಳಲ್ಲಿ ತೊಡಗಿಸಿಕೊಂಡ ಅವರು ಬಂಡಾಯ ಸಾಹಿತ್ಯ ಸಂಘಟನೆಯ ಸ್ಥಾಪಕರಲ್ಲಿ ಒಬ್ಬರಾಗಿದ್ದರು.

ಸಾಹಿತ್ಯದ ಹಲವು ಪ್ರಕಾರಗಳಲ್ಲಿ ಅವರು ದುಡಿದಿದ್ದರೂ ಸಹ ಬಂಡಾಯ ಸಾಹಿತಿಯಾಗಿ ಹೆಚ್ಚು ಗುರುತಿಸಿಕೊಂಡಿದ್ದರು. ಅವರ ಹೋರಾಟದ ಹಾಡುಗಳು ಕಿಚ್ಚು ಹಚ್ಚಿದ್ದಲ್ಲದೇ ನಾಡಿನ ಹಲವಾರು ಅಭಿಮಾನಿಗಳನ್ನು ಹೊಂದಿದ್ದರು. ಅಂಬೇಡ್ಕರ್‌ರವರ ಕುರಿತು ಅವರು ರಚಿಸಿದ್ದ “ನೀ ಹೋದ ಮರುದಿನ, ಮೊದಲ್ಹಂಗೆ ನಮ್‌ ಬದುಕು ಆಗ್ಯಾದೋ ಬಾಬಾಸಾಹೇಬ..” ಹೋರಾಟದ ಹಾಡು ಹೆಚ್ಚು ಚರ್ಚೆಯನ್ನು ಹುಟ್ಟಿಸಿತ್ತು.

ಹತ್ತಾರು ಪ್ರಬಂಧಗಳು, ನಾಲ್ಕು ಮಹಾಕಾವ್ಯಗಳು, 11 ಕವನ ಸಂಕನಲಗಳು, 12 ನಾಟಕಗಳು, 4 ಜನಪದ ಸಂಪ್ರಬಂಧಗಳು, 5 ಕಾದಂಬರಿಗಳು, ಬೆಳ್ಯಾ ಎಂಬ ಅದ್ವಿತೀಯ ಕಾದಂಬರಿ, ವ್ಯೋಮಾವ್ಯೋಮ ಮಹಾಕಾವ್ಯ ರಚಿಸುವ ಮೂಲಕ ಕನ್ನಡ ಸಾಹಿತ್ಯ ಲೋಕಕ್ಕೆ ಅನನ್ಯ ಕೊಡುಗೆ ನೀಡಿದ್ದಾರೆ.

ಅವರ ಸ್ವಗ್ರಾಮ ಚಿತ್ತಾಪುರ ತಾಲ್ಲೂಕಿನ ಶಂಕರವಾಡಿಯಲ್ಲಿ ಇಂದು ಮಧ್ಯಾಹ್ನ 3ಕ್ಕೆ ಅಂತ್ಯಕ್ರಿಯೆ ನೆರವೇರಲಿದೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮೋದಿ ದ್ವೇಷ ಭಾಷಣದ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದ ಬಿಜೆಪಿ ಜಿಲ್ಲಾಧ್ಯಕ್ಷ ಪಕ್ಷದಿಂದಲೇ ಉಚ್ಚಾಟನೆ!

0
ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮರ ವಿರುದ್ಧ ಮಾಡಿರುವ ದ್ವೇಷ ಭಾಷಣದ ಬಗ್ಗೆ ಮಾಧ್ಯಮವೊಂದರಲ್ಲಿ ತನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದಕ್ಕೆ ರಾಜಸ್ಥಾನದ ಬಿಕಾನೇರ್ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾಧ್ಯಕ್ಷನನ್ನು ಪಕ್ಷದಿಂದಲೇ ಉಚ್ಚಾಟಿಸಲಾಗಿದೆ. ಈ ವಿಚಾರ ಈಗ...