Homeಮುಖಪುಟಹಿರಿಯ ಸಾಹಿತಿ, ಸಂಶೋಧಕ ಚಿದಾನಂದಮೂರ್ತಿ ಇನ್ನಿಲ್ಲ

ಹಿರಿಯ ಸಾಹಿತಿ, ಸಂಶೋಧಕ ಚಿದಾನಂದಮೂರ್ತಿ ಇನ್ನಿಲ್ಲ

- Advertisement -
- Advertisement -

ಕನ್ನಡದ ಹಿರಿಯ ಸಂಶೋಧಕ ಡಾ.ಎಂ.ಚಿದಾನಂದಮೂರ್ತಿಯವರು ತೀವ್ರ ಅನಾರೋಗ್ಯದ ಕಾರಣದಿಂದ ಇಂದು ಬೆಳಿಗ್ಗೆಇಹಲೋಕ ತ್ಯಜಿಸಿದ್ದಾರೆ.

88 ವಯಸ್ಸಿನ ಅವರು ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಇಂದು ಮುಂಜಾನೆ ನಿಧನರಾಗಿದ್ದಾರೆ.

ಚಿದಾನಂದಮೂರ್ತಿಯವರ ಸಾವಿಗೆ ನಾಡಿನ ಹಲವಾರು ಜನ ಸಂತಾಪ ವ್ಯಕ್ತಪಡಿಸಿದ್ದಾರೆ.

ಘನ ವಿದ್ವಾಂಸರು, ಅಪ್ರತಿಮ ಸಂಶೋಧಕರು, ಇತಿಹಾಸ ತಜ್ಞರು, ನಾಡು ನುಡಿಯ ಅಸ್ಮಿತೆಗಾಗಿ ಸದಾ ಹೋರಾಡಿದವರು ಶ್ರೀ ಚಿದಾನಂದ ಮೂರ್ತಿಯವರು. ಅವರ ನಿಧನದ ಸುದ್ದಿ ಅತೀವ ದುಃಖ ತಂದಿದೆ. ಅವರ ಆತ್ಮಕ್ಕೆ ಚಿರಶಾಂತಿ ದೊರಕಲಿ. ಕುಟುಂಬ ಮತ್ತು ಅಭಿಮಾನಿ ಬಳಗಕ್ಕೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸಿಎಂ ಯಡಿಯೂರಪ್ಪ ತಿಳಿಸಿದ್ದಾರೆ.

ಹಿರಿಯ ಸಾಹಿತಿ, ಸಂಶೋಧಕ ಡಾ.ಎಂ.ಚಿದಾನಂದ ಮೂರ್ತಿ ಅವರ ನಿಧನದ ಸುದ್ದಿ ತಿಳಿದು ದು:ಖವಾಯಿತು. ಅವರ ಸಂಶೋಧನೆ ಮತ್ತು ಸಾಹಿತ್ಯದ‌ ಜೊತೆಯಲ್ಲಿ ಅವರ ನೇರ ನಡೆ-ನುಡಿ, ಸೈದ್ಧಾಂತಿಕ ಭಿನ್ನಾಭಿಪ್ರಾಯವನ್ನು‌ ಮೀರಿದ ಸ್ನೇಹಶೀಲ ಗುಣವನ್ನು ನಾಡು ಸದಾ ಸ್ಮರಿಸುತ್ತದೆ. ಅವರ ಕುಟುಂಬಕ್ಕೆ ನನ್ನ ಸಂತಾಪಗಳು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಹಿರಿಯ ಸಂಶೋಧಕ, ಕನ್ನಡ ಗರುಡ ಡಾ. ಚಿದಾನಂದ ಮೂರ್ತಿ ಅವರ ನಿಧನದಿಂದ ನಾಡು ಅಪರೂಪದ ವಿದ್ವಾಂಸರನ್ನು ಕಳೆದುಕೊಂಡಿದೆ. ಕನ್ನಡ ಶಕ್ತಿ ಕೇಂದ್ರ ಸ್ಥಾಪಿಸಿದ್ದ ‘ಚಿಮೂ’ಎಂದೇ ಖ್ಯಾತರಾಗಿದ್ದ ಹಿರಿಯ ಜೀವ ನಾಡುನುಡಿಜಲಕ್ಕಾಗಿ ಅಹರ್ನಿಶಿ ಶ್ರಮಿಸಿದ್ದರು. ಮೃತರ ಕುಟುಂಬ ಸದಸ್ಯರಿಗೆ,ಅವರ ಅಪಾರ ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿ ಭಗವಂತ ಕರುಣಿಸಲಿ ಎಂದು ಮಾಜಿ ಸಿಎಂ ಎಚ್‌.ಡಿ ಕುಮಾರಸ್ವಾಮಿ ಪ್ರಾರ್ಥಿಸಿದ್ದಾರೆ.

ವಿಜಯನಗರ ಬಳಿಯ ಹಂಪಿನಗರದ ಮೂರನೇ ಕ್ರಾಸ್‌ನಲ್ಲಿರು ಚಿಮೂರವರ ಸ್ವಗೃಹದಲ್ಲಿ ಮೃತರ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಿಕೊಡಲಾಗಿದ್ದು ಭಾನುವಾರ ಅಂತ್ಯಕ್ರಿಯೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಸಾಂವಿಧಾನಿಕ ಸಂಸ್ಥೆಗಳು ಪ್ರಧಾನಿಯ ವೈಯಕ್ತಿಕ ಸ್ವತ್ತಲ್ಲ: ರಾಹುಲ್‌ ಗಾಂಧಿ

0
ಸಾಂವಿಧಾನಿಕ ಸಂಸ್ಥೆಗಳು ಪ್ರಧಾನಿಯ ವೈಯಕ್ತಿಕ ಸ್ವತ್ತಲ್ಲ, ಅವು ಪ್ರತಿಯೊಬ್ಬ ಭಾರತೀಯ ಪ್ರಜೆಯ ಆಸ್ತಿ  ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಪ್ರಧಾನಿ ವಿರುದ್ಧ ವಾಗ್ಧಾಳಿಯನ್ನು ನಡೆಸಿದ್ದಾರೆ. ವಯನಾಡ್ ಜಿಲ್ಲಾ ಕೇಂದ್ರದಿಂದ 20 ಕಿ.ಮೀ ದೂರದಲ್ಲಿರುವ...