Homeಕರ್ನಾಟಕನೆರೆ ಸಂತ್ರಸ್ತರಿಗೆ ಪರಿಹಾರ ಕೊಡುವ ಯೋಗ್ಯತೆ ನರೇಂದ್ರ ಮೋದಿ ಸರ್ಕಾರಕ್ಕಿಲ್ಲ: ಸಿದ್ದು ಟೀಕೆ..

ನೆರೆ ಸಂತ್ರಸ್ತರಿಗೆ ಪರಿಹಾರ ಕೊಡುವ ಯೋಗ್ಯತೆ ನರೇಂದ್ರ ಮೋದಿ ಸರ್ಕಾರಕ್ಕಿಲ್ಲ: ಸಿದ್ದು ಟೀಕೆ..

- Advertisement -
- Advertisement -

“ಸನ್ಮಾನ್ಮ ಬಿ.ಎಸ್ ಯಡಿಯೂರಪ್ಪನವರೆ, ನಿಮ್ಮ ಜಗಳದಲ್ಲಿ ಕರ್ನಾಟಕವನ್ನು ಯಾಕೆ ಬಲಿಕೊಡುತ್ತೀರಿ? ನೆರೆ ಸಂತ್ರಸ್ತರಿಗೆ ಪರಿಹಾರ ಕೊಡುವ ಯೋಗ್ಯತೆ ನರೇಂದ್ರ ಮೋದಿ ಸರ್ಕಾರಕ್ಕಿಲ್ಲ, ನ್ಯಾಯಬದ್ಧ ಪರಿಹಾರ ಕೇಳಿ ವರದಿ ಸಲ್ಲಿಸುವ ಯೋಗ್ಯತೆ ನಿಮಗೂ‌ ಇಲ್ಲ. ಆರ್ಥಿಕವಾಗಿ ಮಾತ್ರವಲ್ಲ, ಬೌದ್ದಿಕವಾಗಿಯೂ ನಿಮ್ಮ ಸರ್ಕಾರ ದಿವಾಳಿಯಾಗಿದೆ” ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹರಿಹಾಯ್ದಿದ್ದಾರೆ.

ಈ ಕುರಿತು ಸರಣಿ ಟ್ವೀಟ್‌ಗಳನ್ನು ಮಾಡಿರುವ ಸಿದ್ದರಾಮಯ್ಯನವರು “ಸನ್ಮಾನ್ಯ ಮುಖ್ಯಮಂತ್ರಿಗಳಾದ ಯಡಿಯೂರಪ್ಪನವರೆ, ನಿಮ್ಮ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿದೆ ಎಂದು ಒಪ್ಪಿಕೊಂಡ ನಂತರ ಒಂದು ಕ್ಷಣ ಕೂಡಾ ಅಧಿಕಾರದಲ್ಲಿ ಮುಂದುವರಿಯುವ ಅರ್ಹತೆ ನಿಮಗಿಲ್ಲ. ದಯವಿಟ್ಟು ರಾಜೀನಾಮೆ ಕೊಟ್ಟು ಹೊರಟುಬಿಡಿ. ನಿಮ್ಮ ಅಸಾಮರ್ಥ್ಯಕ್ಕಾಗಿ ರಾಜ್ಯದ ಜನರನ್ನು ಶಿಕ್ಷಿಸಬೇಡಿ.” ಎಂದಿದ್ದಾರೆ.

ಇದರ ಜೊತೆಗೆ ಸಿದ್ದರಾಮಯ್ಯನವರು ತಮ್ಮ ಟ್ವೀಟ್‌ನಲ್ಲಿ ವಿವಿಧ ಸುದ್ದಿವಾಹಿನಿಗಳ ಸುದ್ದಿಗಳ ಫೋಟೋಗಳನ್ನು ಲಗತ್ತಿಸಿದ್ದಾರೆ.

ಒಟ್ಟಿನಲ್ಲಿ ಪ್ರವಾಹ ಪರಿಹಾರ ಕೊಡದ ಕೇಂದ್ರ ಸರ್ಕಾರ ಮತ್ತು ಪರಿಹಾರವನ್ನು ದಿಟ್ಟಿಸಿ ಕೇಳದ ರಾಜ್ಯಸರ್ಕಾರದ ವಿರುದ್ಧ ದಿನೇ ದಿನೇ ಆಕ್ರೋಶ ಹೆಚ್ಚಾಗುತ್ತಿದೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಇವಿಎಂ-ವಿವಿಪ್ಯಾಟ್ ಎಲ್ಲಾ ಮತಗಳ ಎಣಿಕೆ: ಅರ್ಜಿಗಳನ್ನು ವಜಾಗೊಳಿಸಿದ ಸುಪ್ರೀಂ ಕೋರ್ಟ್

0
ಇವಿಎಂ ಮತ್ತು ವಿವಿಪ್ಯಾಟ್‌ಗಳ ಎಲ್ಲಾ (ಶೇ.100) ಮತಗಳನ್ನು ತಾಳೆ ಮಾಡಿ ನೋಡಲು ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿಗಳನ್ನು ಸುಪ್ರಿಂ ಕೋರ್ಟ್ ವಜಾಗೊಳಿಸಿದೆ. ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ದೀಪಂಕರ್ ದತ್ತಾ...