Homeಮುಖಪುಟಕನ್ನಡದಲ್ಲಿ ಸೆಟ್ಟೇರಿದ ಮೊದಲ ವಾಕ್ಚಿತ್ರ 'ಭಕ್ತಧ್ರುವ'ದ ನಾಯಕಿ ಎಸ್.ಕೆ ಪದ್ಮಾದೇವಿ ಇನ್ನಿಲ್ಲ 

ಕನ್ನಡದಲ್ಲಿ ಸೆಟ್ಟೇರಿದ ಮೊದಲ ವಾಕ್ಚಿತ್ರ ‘ಭಕ್ತಧ್ರುವ’ದ ನಾಯಕಿ ಎಸ್.ಕೆ ಪದ್ಮಾದೇವಿ ಇನ್ನಿಲ್ಲ 

- Advertisement -
- Advertisement -

ಕನ್ನಡದಲ್ಲಿ ಸೆಟ್ಟೇರಿದ ಮೊದಲ ವಾಕ್ಚಿತ್ರ `ಭಕ್ತಧ್ರುವ’ (1934)ದಲ್ಲಿ ನಟಿಸುವ ಮೂಲಕ ಬೆಳ್ಳಿತೆರೆಗೆ ಕಾಲಿಟ್ಟ ಎಸ್.ಕೆ ಪದ್ಮಾದೇವಿಯವರು ನಿಧನರಾಗಿದ್ದಾರೆ. ಈಗ ಅವರಿಗೆ 95 ವರ್ಷ ವಯಸ್ಸಾಗಿತ್ತು.

ಬೆಂಗಳೂರಿನಲ್ಲಿ ಹುಟ್ಟಿದ ಅವರು ಬಳ್ಳಾರಿ ರಾಘವಾಚಾರ್ಯರ ಮೂಲಕ ರಂಗಭೂಮಿ ಪ್ರವೇಶಿಸಿದವರು. ನಂತರ ಹೆಚ್.ಎಲ್.ಎನ್.ಸಿಂಹ ಅವರ ನಾಟಕ ಕಂಪೆನಿಯಲ್ಲಿ ಅಭಿನಯಿಸಿದರು. ಜೊತೆಗೆ ಸ್ವಂತ ನಾಟಕ ಸಂಸ್ಥೆಯನ್ನು ಕಟ್ಟಿದರು. ಇವರ ಅಭಿನಯದ ‘ಸಂಸಾರನೌಕೆ’ (1936) ಹೆಸರು ತಂದು ಕೊಟ್ಟ ಚಿತ್ರವಾಗಿದೆ. ವಿಶೇಷವೆಂದರೆ ಈ ಚಿತ್ರದಲ್ಲಿ ನಾಲ್ಕು ಹಾಡುಗಳನ್ನು ಅವರೇ ಹಾಡಿದ್ದರು ಮಾತ್ರವಲ್ಲದೇ ಒಂದು ಹಾಡನ್ನು ಸ್ವತಃ ಇವರೇ ವೀಣೆ ನುಡಿಸಿಕೊಂಡು ಹಾಡಿದ್ದರು.

‘ವಸಂತಸೇನ’, ‘ಭಕ್ತ ಸುಧಾಮ’, ‘ಜಾತಕ ಫಲ’ ಚಿತ್ರಗಳಲ್ಲಿಯೂ ಎಸ್.ಕೆ ಪದ್ಮಾದೇವಿಯವರು ನಟಿಸಿದರು. ‘ಭಕ್ತಸುಧಾಮ’ದಲ್ಲಿ ಮಧುಗಿರಿ ಮೀನಾಕ್ಷಿ ಎಂದು ಹೆಸರು ಬದಲಾಯಿಸಿಕೊಂಡರು. ಜೊತೆಗೆ ಎರಡು ತೆಲುಗು ಚಿತ್ರಗಳಲ್ಲಿಯೂ ಅಭಿನಯಿಸಿದರು. ತದನಂತರ ರಂಗಭೂಮಿಯಲ್ಲೇ ತೊಡಗಿಕೊಂಡು ಬಹಳ ಕಾಲ ಚಲನಚಿತ್ರದ ಅಭಿನಯ ನಿಲ್ಲಿಸಿದರು. ‘ಮುಕ್ತಿ’, ‘ಅಮರ ಮಧುರ ಪ್ರೇಮ’, ‘ಸಂಕ್ರಾಂತಿ’ ಚಿತ್ರಗಳಲ್ಲಿ ಅಭಿನಯಿಸಿದರು.

ಗಿರೀಶ್ ಕಾಸರವಳ್ಳಿ ನಿರ್ದೇಶನದ ‘ಕ್ರೌರ್ಯ’ ಚಿತ್ರದ ರೇಣುಕಮ್ಮ ಮುರಗೊಡು ಅವರ ಪಾತ್ರಕ್ಕೆ ಕಂಠದಾನ ಮಾಡಿದರು. ಮಗ ನಂದಕಿಶೋರ್ ನಿರ್ದೇಶಿಸಿದ ‘ಕಿರಣ’ ಟೆಲಿ ಫಿಲಂನಲ್ಲಿ ಅಜ್ಜಿ ಪಾತ್ರ ಮಾಡಿದರು. ಆಕಾಶವಾಣಿಯಲ್ಲಿ ಅನೇಕ ವರ್ಷಗಳು ಕೆಲಸ ಮಾಡಿದ ಪದ್ಮಾದೇವಿಯವರು ಅಲ್ಲಿಯೂ ಒಳ್ಳೆಯ ಹೆಸರು ಮಾಡಿದ್ದರು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಜೆಪಿಗೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ: ಕಾಂಗ್ರೆಸ್ ಸೇರ್ಪಡೆ ಸಾಧ್ಯತೆ

0
ಲೋಕಸಭೆ ಚುನಾವಣೆಯಲ್ಲಿ ಕೊಪ್ಪಳ ಕ್ಷೇತ್ರದ ಟಿಕೆಟ್‌ ಕೈತಪ್ಪಿದ ಹಿನ್ನೆಲೆ ಬಿಜೆಪಿ ವಿರುದ್ದ ಮುನಿಸಿಕೊಂಡಿದ್ದ ಹಾಲಿ ಸಂಸದ ಸಂಗಣ್ಣ ಕರಡಿ ಅವರು ತಮ್ಮ ಸಂಸದ ಸ್ಥಾನಕ್ಕೆ ಮತ್ತು ಬಿಜೆಪಿ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ...