ನಾನು ನಿಷ್ಠಾವಂತ ಕಾಂಗ್ರೆಸ್ಸಿಗನಾಗಿ ಉಳಿಯುತ್ತೇನೆ, ಪಕ್ಷವನ್ನು ಸದೃಢವಾಗಿ ಕಟ್ಟುತ್ತೇನೆ: ರಾಜಿನಾಮೆ ಬಳಿಕ ಸಿದ್ದರಾಮಯ್ಯ

ನನಗೆ ಜವಾಬ್ದಾರಿಗಳನ್ನು ವಹಿಸಿಕೊಟ್ಟಿದ್ದಕ್ಕಾಗಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ ಪಕ್ಷದ ಅಧ್ಯಕ್ಷೆ ಶ್ರೀಮತಿ ಸೋನಿಯಾ ಗಾಂಧಿಯವರಿಗೆ ನಾನು ಪ್ರಾಮಾಣಿಕವಾಗಿ ಧನ್ಯವಾದಗಳನ್ನು ತಿಳಿಸುತ್ತೇನೆ. ಪಕ್ಷವನ್ನು ಬಲಪಡಿಸಲು ನಿಷ್ಠಾವಂತ ಕಾಂಗ್ರೆಸ್ಸಿಗರಾಗಿ ನನ್ನ ಪ್ರಯತ್ನಗಳನ್ನು ಮುಂದುವರಿಸುತ್ತೇನೆ ಎಂದು ರಾಜಿನಾಮೆಯ ನಂತರ ಸಿದ್ದರಾಮಯ್ಯ ಟ್ವೀಟ್‌ ಮಾಡಿದ್ದಾರೆ.

ಇದಕ್ಕೂ ಮೊದಲು ಉಪಚುನಾವಣೆಯ ಸೋಲನ್ನು ಒಪ್ಪಿಕೊಂಡು ಕಾಂಗ್ರೆಸ್‌ ಶಾಸಕಾಂಗ ನಾಯಕತ್ವ ಮತ್ತು ವಿರೋಧ ಪಕ್ಷದ ನಾಯಕನ ಸ್ಥಾನಕ್ಕೆ ರಾಜಿನಾಮೆ ನೀಡುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದ್ದರು.

ನಾನು ಜನರ ಆದೇಶವನ್ನು ಗೌರವಿಸುತ್ತೇನೆ. ಆಪರೇಷನ್ ಕಮಲದ ಪಿತಾಮಹಾರಾದ ಬಿಜೆಪಿ ನಾಯಕರಿಗೆ ಮತದಾರರು ಪಾಠ ಕಲಿಸುತ್ತಾರೆ ಎಂದು ಭಾವಿಸಿದ್ದೆ ಆದರೆ ಹಾಗಾಗಲಿಲ್ಲ. ಹಾಗಾಗಿ ನಾನು ಈ ಸೋಲಿನ ನೈತಿಕ ಹೊಣೆ ಹೊತ್ತು ಕಾಂಗ್ರೆಸ್‌ ಶಾಸಕಾಂಗ ನಾಯಕತ್ವ ಮತ್ತು ವಿರೋಧ ಪಕ್ಷದ ನಾಯಕನ ಸ್ಥಾನಕ್ಕೆ ರಾಜಿನಾಮೆ ನೀಡುತ್ತಿದ್ದೇನೆ ಎಂದು ಘೋಷಿಸಿದ್ದಾರೆ.

Donate

ಜನಪರ ಪತ್ರಿಕೋದ್ಯಮದ ಉಳಿವು ಮತ್ತು ಬೆಳವಣಿಗೆಗಾಗಿ ನಿಮ್ಮ ನಿರಂತರ ಆರ್ಥಿಕ ನೆರವು ಅಗತ್ಯ. ನಿಮ್ಮಿಂದ ಸಾಧ್ಯವಿರುವಷ್ಟು ಹೆಚ್ಚಿನ ವಂತಿಗೆಯನ್ನು ನೀಡಲು ಕೆಳಗಿನ ಲಿಂಕುಗಳನ್ನು ಕ್ಲಿಕ್ಕಿಸಿ.
ಒಂದು ವೇಳೆ ಈ ಲಿಂಕಿನ ಮೂಲಕ ಹಣ ಪಾವತಿ ಮಾಡುವುದಕ್ಕೆ ಅಡಚಣೆ ಇದ್ದರೆ, ಈ ಪುಟದ ಮೇಲೆ ಅಥವಾ ಕೆಳಗೆ ಇರುವ ವಂತಿಗೆ – Donate ಬಟನ್.ಅನ್ನು ಕ್ಲಿಕ್ಕಿಸಿ.
ಧನ್ಯವಾದಗಳು
Independent journalism can’t be independent without your support, contribute by clicking below.

LEAVE A REPLY

Please enter your comment!
Please enter your name here