HomeUncategorized’ಕಾವೇರಿ ಕೂಗು’ ಅಭಿಯಾನ ಅರ್ಜಿ ವಿಚಾರಣೆಯಿಂದ ಹಿಂದೆ ಸರಿದ ನ್ಯಾಯಮೂರ್ತಿ

’ಕಾವೇರಿ ಕೂಗು’ ಅಭಿಯಾನ ಅರ್ಜಿ ವಿಚಾರಣೆಯಿಂದ ಹಿಂದೆ ಸರಿದ ನ್ಯಾಯಮೂರ್ತಿ

- Advertisement -
- Advertisement -

’ಕಾವೇರಿ ಕೂಗು’ ಅಭಿಯಾನಕ್ಕಾಗಿ ಸಾರ್ವಜನಿಕರಿಂದ ಕೋಟ್ಯಂತರ ರೂಪಾಯಿ ಸಂಗ್ರಹ ಮಾಡುತ್ತಿರುವುದನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿ ವಿಚಾರಣೆಯಿಂದ ನ್ಯಾ.ಎಸ್.ಆರ್‌.ಕೃಷ್ಣಕುಮಾರ್‌ ಹಿಂದೆ ಸರಿದಿದ್ದಾರೆ. ’ಕಾವೇರಿ ಕೂಗು’ ಹೆಸರಲ್ಲಿ ಈಶ ಫೌಂಡೇಶನ್ ಸುಮಾರು ೨೫೩ ಕೋಟಿ ಸಸಿ ನೆಡುವ ಅಭಿಯಾನ ಹಮ್ಮಿಕೊಂಡಿದೆ. ಅದಕ್ಕಾಗಿ ಒಂದು ಸಸಿಗೆ ೪೨ ರೂ.ಗಳಂತೆ ಜನರಿಂದ ೧೦,೬೨೬ ಕೋಟಿ ರೂ. ಸಂಗ್ರಹಿಸಲಾಗುತ್ತಿದೆ ಎಂದು ವಕೀಲ ಎ.ವಿ.ಅಮರನಾಥನ್ ಅರ್ಜಿ ಸಲ್ಲಿಸಿದ್ದರು.

ವಕೀಲ ಎ.ವಿ. ಅಮರನಾಥನ್ ಸಲ್ಲಿಸಿದ ಅರ್ಜಿಯ ವಿಚಾರಣೆಯನ್ನು ಸಿಜೆ ಎ.ಎಸ್‌.ಓಕ್‌ ಹಾಗೂ ನ್ಯಾ.ಎಸ್‌.ಆರ್‌.ಕೃಷ್ಣಕುಮಾರ್‌ ಅವರಿದ್ದ ಪೀಠ ಕೈಗೆತ್ತಿಕೊಂಡಿತ್ತು. ಈ ವೇಳೆ ಅರ್ಜಿ ವಿಚಾರಣೆಯಿಂದ ಹಿಂದೆ ಸರಿಯುತ್ತಿರುವುದಾಗಿ ನ್ಯಾ.ಕೃಷ್ಣಕುಮಾರ್‌ ತಿಳಿಸಿದರು. ಹೀಗಾಗಿ ಸಿಜೆ ಎ.ಎಸ್‌.ಓಕ್ ಅರ್ಜಿಯನ್ನು ಬೇರೊಂದು ಪೀಠದ ಮುಂದೆ ವಿಚಾರಣೆಗೆ ನಿಗದಿಪಡಿಸುವಂತೆ ಹೈಕೋರ್ಟ್‌ ರಿಜಿಸ್ಟ್ರಾರ್‌ಗೆ ಸೂಚಿಸಿ, ವಿಚಾರಣೆಯನ್ನು ಮುಂದೂಡಿದರು.

ಅರ್ಜಿದಾರ ವಕೀಲ ಎ.ವಿ.ಅಮರನಾಥನ್, ಸಸಿ ನೆಡುವುದಕ್ಕೆ ಆಕ್ಷೇಪವಿಲ್ಲ. ಆದರೆ ಸರ್ಕಾರಿ ಜಮೀನಿನಲ್ಲಿ ಇಷ್ಟೊಂದು ದೊಡ್ಡ ಮಟ್ಟದಲ್ಲಿ ಸಸಿ ನೆಡಲು ಜನರಿಂದ ಸಾವಿರಾರು ಕೋಟಿ ರೂ. ಸಂಗ್ರಹ ಮಾಡುತ್ತಿರುವುದಕ್ಕೆ ವಿರೊಧವಿದೆ ಎಂದು ಹೇಳಿದ್ದರು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಚುನಾವಣೆಯಲ್ಲಿ ಬೆಂಬಲಿಸಿಲ್ಲ ಎಂದು ದಲಿತರ ಮೇಲೆ ಹಲ್ಲೆ ಪ್ರಕರಣ: YSRCP ಮುಖಂಡನಿಗೆ ಜೈಲು

0
1996ರಲ್ಲಿ ನಡೆದಿದ್ದ ದಲಿತರ ಮೇಲಿನ ದೌರ್ಜನ್ಯ ಮತ್ತು ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ವೈಎಸ್‌ಆರ್ ಕಾಂಗ್ರೆಸ್ ಪಕ್ಷದ (ವೈಎಸ್‌ಆರ್‌ಸಿಪಿ) ಮುಖಂಡ ತೋಟ ತ್ರಿಮೂರ್ತಿಲು ಸೇರಿದಂತೆ ಒಂಬತ್ತು ಮಂದಿಯನ್ನು ವಿಶಾಖಪಟ್ಟಣ ನ್ಯಾಯಾಲಯವು ದೋಷಿ ಎಂದು ಘೋಷಿಸಿ...