Homeಮುಖಪುಟಜಸ್ಟೀಸ್ ಲೋಯಾ ಕೇಸಿಗೂ ಹಾಲಿ ಗೃಹಸಚಿವ ಅಮಿತ್ ಷಾಗೂ ಸಂಬಂಧವೇನು?

ಜಸ್ಟೀಸ್ ಲೋಯಾ ಕೇಸಿಗೂ ಹಾಲಿ ಗೃಹಸಚಿವ ಅಮಿತ್ ಷಾಗೂ ಸಂಬಂಧವೇನು?

ಜಸ್ಟೀಸ್ ಲೋಯಾ ಅನುಮಾನಾಸ್ಪದ ಸಾವಿನ ನಂತರ ಏನಾಯ್ತು ಗೊತ್ತೆ? ಅವರ ಸ್ಥಾನಕ್ಕೆ ಬಂದ ಜ.ಗೋಸ್ವಾಮಿ ಎಂಬುವವರು ಈ ಕೇಸಿನಲ್ಲಿ ಅಮಿತ್ ಶಾಗೆ ಕ್ಲೀನ್ ಚಿಟ್ ದಯಪಾಲಿಸಿಬಿಟ್ಟರು. ಅಲ್ಲಿಗೆ ಒಂದು ಅಧ್ಯಾಯ ಮುಗಿದಂತಾಯ್ತು.

- Advertisement -
- Advertisement -

| ನಾನುಗೌರಿ ಡೆಸ್ಕ್ |

ಬ್ರಜ್‍ಗೋಪಾಲ್ ಹರಕಿಷನ್ ಲೋಯಾ ಸಿಬಿಐ ಕೋರ್ಟಿನ ಜಡ್ಜ್. ಗುಜರಾತಿನ ಸೊಹ್ರಾಬುದ್ದೀನ್ ಶೇಖ್ ನಕಲಿ ಎನ್‍ಕೌಂಟರ್ ಕೇಸಿನ ವಿಚಾರಣೆ ನಡೆಸುತ್ತಿದ್ದವರು. ಇವರು 2014ರ ಡಿಸೆಂಬರ್ 1ರಂದು ಸಂಬಂದಿಕರ ಮದುವೆಗೆಂದು ನಾಗಪುರಕ್ಕೆ ತೆರಳಿದ್ದ ಸಂದರ್ಭದಲ್ಲಿ ಅನುಮಾನಾಸ್ಪದ ‘ಹೃದಯಾಘಾತ’ದಿಂದ ಸಾವನ್ನಪ್ಪಿದರು. ಅವರ ಅಂತ್ಯಕ್ರಿಯೆಗಳನ್ನೂ ಕೂಡ ತರಾತುರಿಯಲ್ಲಿ ಮುಗಿಸಲಾಗಿತ್ತು.

ಇದಾದ ಕೆಲದಿನಗಳಲ್ಲಿ ಜ.ಲೋಯಾ ಕುಟುಂಬದವರು ಸ್ಫೋಟಕ ವಿಷಯಗಳನ್ನು ಬಿಚ್ಚಿಟ್ಟರು. ಅವರ ಪ್ರಕಾರ ‘ಈ ಕೇಸಿನಲ್ಲಿ ತಮಗೆ ಅನುಕೂಲಕರ ತೀರ್ಪು ನೀಡುವಂತೆ ಲೋಯಾ ಅವರ ಮೇಲೆ ಭಾರೀ ಒತ್ತಡ ಇತ್ತು. ಅದಕ್ಕಾಗಿ ನೂರು ಕೋಟಿ ರೂಪಾಯಿಗಳ ಆಮಿಷವನ್ನೂ ಒಡ್ಡಲಾಗಿತ್ತು. ಆದರೆ ನ್ಯಾಯಪ್ರಜ್ಞೆಗೆ ಹೆಸರಾಗಿದ್ದ ಲೋಯಾ ಅವರು ಇಂಥ ಆಮಿಷವನ್ನು ತಿರಸ್ಕರಿಸಿದರು. ಬೆದರಿಕೆಗೆ ಅವರು ಸೊಪ್ಪು ಹಾಕಲಿಲ್ಲ. ಪರಿಣಾಮವಾಗಿಯೇ ಅವರನ್ನು ಕೊಲೆ ಮಾಡಲಾಗಿದೆ’ ಎಂಬ ಸ್ಫೋಟಕ ಸುದ್ದಿಗಳನ್ನು ಹೊರಹಾಕಿದ್ದರು.ಇಷ್ಟಕ್ಕೂ ಈ ಕೇಸಿನಲ್ಲಿ ಆರೋಪಿ ಸ್ಥಾನದಲ್ಲಿದ್ದದ್ದು ಯಾರಂತೀರಿ? ಪ್ರಧಾನಿ ಮೋದಿಯವರಿಗೆ ಪರಮಾಪ್ತ ಹಾಗೂ ಬಿಜೆಪಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ರಾಗಿದ್ದು ಹಾಲಿ ಭಾರತದ ಗೃಹ ಸಚಿವ ಅಮಿತ್ ಶಾ. ಸೊಹ್ರಾಬುದ್ದೀನ್ ನಕಲಿ ಎನ್‍ಕೌಂಟರ್ ಕೇಸಿನಲ್ಲಿ 2010ರಲ್ಲಿ ಅಮಿತ್ ಶಾ 3 ತಿಂಗಳ ಜೈಲುವಾಸ ಅನುಭವಿಸಿ ಜಾಮೀನಿನ ಮೇಲೆ ಹೊರ ಬಂದಿದ್ದರು. ಈ ಕೇಸಿನಲ್ಲಿ ಶಾ ಕೈವಾಡದ ಬಗ್ಗೆ ಅನೇಕ ಸಾಕ್ಷ್ಯಾಧಾರಗಳನ್ನು ಸುಪ್ರಿಂ ಕೋರ್ಟ್ ಪರಿಗಣಿಸಿತ್ತು. ಸಾಕ್ಷ್ಯನಾಶ ಮಾಡುವ ಸಾಧ್ಯತೆಯನ್ನು ಮನಗಂಡು ಈತನನ್ನು ಎರಡು ವರ್ಷಗಳ ಕಾಲ ಗುಜರಾತ್‍ನಿಂದ ಗಡಿಪಾರು ಮಾಡಿತ್ತು. ಅಂದಹಾಗೆ ಆಗ ಅಮಿತ್ ಶಾ ಗುಜರಾತ್‍ನ ಗೃಹಮಂತ್ರಿಯಾಗಿದ್ದರು ಎಂಬುದನ್ನು ಮರೆಯುವಂತಿಲ್ಲ.

ಈ ಕೇಸಿನಲ್ಲಿ ಅಮಿತ್ ಶಾ ಜೊತೆ ಡಿಐಜಿ ವಂಜಾರ ಒಳಗೊಂಡು 6 ಮಂದಿ ಹಿರಿಯ ಪೊಲೀಸ್ ಅಧಿಕಾರಿಗಳೂ ಜೈಲು ಪಾಲಾಗಿದ್ದರು. ಮೋದಿ ಪ್ರಧಾನಿಯಾಗಿ ಪಂಜರದ ಗಿಳಿ ಕುಖ್ಯಾತಿಯ ಸಿಬಿಐ ಅವರ ಹಿಡಿತಕ್ಕೆ ಬಂದ ಮೇಲೆ ಈ ಅಧಿಕಾರಿಗಳಿಗೆ ಬಿಡುಗಡೆಯ ಭಾಗ್ಯ ಸಿಕ್ಕಿದ್ದು ಕಾಕತಾಳಿಯವೇನಲ್ಲ.

ಗುಜರಾತ್‍ನಿಂದ ಹೊರಗಡೆ ಈ ಕೇಸಿನ ವಿಚಾರಣೆ ನಡೆಸಬೇಕೆಂಬ ಸುಪ್ರಿಂ ಆದೇಶದ ಪ್ರಕಾರ ಸಿಬಿಐ ಕೋರ್ಟ್ ವಿಚಾರಣೆ ನಡೆಸಿತ್ತು. ಈ ಹಿಂದೆ ವಿಚಾರಣೆ ನಡೆಸುತ್ತಿದ್ದ ಜ.ಉತ್ಪಾತ್ ಅವರು ಅಮಿತ್ ಶಾ ಕೋರ್ಟಿನ ಮುಂದೆ ಖುದ್ದು ಹಾಜರಾಗಬೇಕೆಂದು ಆದೇಶ ಹೊರಡಿಸಿದ ಕೆಲವೇ ದಿನಗಳಲ್ಲಿ ಎತ್ತಂಗಡಿಯಾದರು. ಅವರ ಸ್ಥಾನಕ್ಕೆ ಬಂದವರೇ ನತದೃಷ್ಟ ಜ.ಲೋಯಾ.

ಜಸ್ಟೀಸ್ ಲೋಯಾ ಅನುಮಾನಾಸ್ಪದ ಸಾವಿನ ನಂತರ ಏನಾಯ್ತು ಗೊತ್ತೆ? ಅವರ ಸ್ಥಾನಕ್ಕೆ ಬಂದ ಜ.ಗೋಸ್ವಾಮಿ ಎಂಬುವವರು ಈ ಕೇಸಿನಲ್ಲಿ ಅಮಿತ್ ಶಾಗೆ ಕ್ಲೀನ್ ಚಿಟ್ ದಯಪಾಲಿಸಿಬಿಟ್ಟರು. ಅಲ್ಲಿಗೆ ಒಂದು ಅಧ್ಯಾಯ ಮುಗಿದಂತಾಯ್ತು.

ನ್ಯಾಯಾಧೀಶರ ನಿಗೂಡ ಸಾವಿನ ತನಿಖೆ ಕೈಗೊಂಡ ಕ್ಯಾರವಾನ್ ಪತ್ರಿಕೆ ಅವರ ಕುಟುಂಬದವರು, ಬಂಧುಮಿತ್ರರು, ಸಹೋದ್ಯೋಗಿಗಳು ಮುಂತಾದವರಿಂದ ಮಾಹಿತಿ ಸಂಗ್ರಹಿಸಿ 2017ರ ನವೆಂಬರ್‍ನಲ್ಲಿ ತನಿಖಾ ವರದಿ ಪ್ರಕಟಿಸಿತು. ಮೂರು ವರ್ಷಗಳ ಹಿಂದೆ ಹೂತುಹೋಗಿದ್ದ ನಿಗೂಡ ಸಾವಿನ ಪ್ರಕರಣಕ್ಕೆ ಆಗಲೇ ಮರುಜೀವ ಬಂದಿದ್ದು. ಇಂಥಾ ಪ್ರಾಮಾಣಿಕ ನ್ಯಾಯಾಧೀಶರ ನಿಗೂಡ ಸಾವಿನ ಪೋಸ್ಟ್‍ಮಾರ್ಟಂ ವರದಿ ಹಾಗೂ ಕಾನೂನು ಪ್ರಕ್ರಿಯೆಗಳಲ್ಲಿ ಹಲವಾರು ಲೋಪದೋಷಗಳು ಕಂಡುಬಂದಿರುವುದರಿಂದ ಸ್ವತಂತ್ರ ತನಿಖೆಗೆ ಆದೇಶಿಸಬೇಕೆಂದು ಕೋರಿ ಸುಪ್ರಿಂಕೋರ್ಟ್‍ನಲ್ಲಿ ಒಂದು ಪಿಐಎಲ್ ದಾಖಲಾಯಿತು. ಇದೇ ಅವಧಿಯಲ್ಲಿ ಬಾಂಬೆ ಹೈಕೋರ್ಟ್‍ನಲ್ಲೂ ಒಂದು ಪಿಐಎಲ್ ದಾಖಲಾಯ್ತು.2018ರ ಜನವರಿಯಲ್ಲಿ ದಾಖಲಾದ ಇಂಥಾ ಘನಗಂಭೀರವಾದ ಪ್ರಕರಣವನ್ನು ಏಪ್ರಿಲ್ 19ರಂದು ಸುಪ್ರಿಂಕೋರ್ಟ್ ಇತ್ಯರ್ಥಪಡಿಸಿದೆ. ‘ಜಸ್ಟೀಸ್ ಲೋಯಾ ಸಾವು ಸಹಜವಾಗಿಯೇ ಸಂಭವಿಸಿದೆ, ಈ ಬಗ್ಗೆ ಯಾವುದೇ ತನಿಖೆಯ ಅಗತ್ಯವಿಲ್ಲ’ ಎಂದು ತೀರ್ಪು ನೀಡಿದ್ದು ಮಾತ್ರವಲ್ಲದೆ ಅರ್ಜಿದಾರರ ಉದ್ದೇಶವನ್ನೇ ಪ್ರಶ್ನೆ ಮಾಡಿದೆ. ನೆನಪಿಡಿ. ಜಸ್ಟೀಸ್ ಲೋಯಾ ಸಾವು ಹೃದಯಾಘಾತದಿಂದ ಸಂಭವಿಸಿದ್ದಲ್ಲ ಎಂದು ಫಾರೆನ್ಸಿಕ್ ತಜ್ಞರು ಅಭಿಪ್ರಾಯಪಟ್ಟಿರುವ ವರದಿಗಳು ಬಂದಿವೆ. ಪೋಸ್ಟ್ ಮಾರ್ಟಂ ವರದಿ ತಯಾರಿಸುವಲ್ಲಿ ಮಹಾರಾಷ್ಟ್ರ ಬಿಜೆಪಿ ಸರ್ಕಾರದ ಸಚಿವರೊಬ್ಬರು ಭಾಗಿಯಾಗಿದ್ದರೆಂಬ ಬಗ್ಗೆಯೂ ವರದಿಗಳು ಪ್ರಕಟವಾಗಿವೆ.

ಈಗ ಸೋಹ್ರಬುದ್ದೀನ್ ನಕಲಿ ಎನ್ ಕೌಂಟರ್ ಪ್ರಕರಣದಲ್ಲಿ ಜೈಲಿಗೆ ಹೋಗಿ ಬಂದ ಭಾರತದ ಗೃಹ ಮಂತ್ರಿಯಾಗಿದ್ದಾರೆ. ಗುಜರಾತ್ ಗಲಭೆಗಳಿಗೆ ನ್ಯಾಯ ಸಿಗುತ್ತದೆ ಎಂದು ನಿರೀಕ್ಷಿಸಬಹುದೇ?

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

FACT CHECK : ಅಧಿಕಾರಕ್ಕೆ ಬಂದರೆ ‘ಪಿತ್ರಾರ್ಜಿತ ಆಸ್ತಿ ತೆರಿಗೆ’ ಜಾರಿಗೊಳಿಸುವುದಾಗಿ ಕಾಂಗ್ರೆಸ್ ಹೇಳಿಲ್ಲ

0
ಕಳೆದ ಎರಡು ದಿನಗಳಿಂದ ದೇಶದಲ್ಲಿ 'ಪಿತ್ರಾರ್ಜಿತ ಆಸ್ತಿ ತೆರಿಗೆ' (Inheritance Tax) ಕುರಿತು ದೊಡ್ಡ ಮಟ್ಟದ ಚರ್ಚೆಗಳು ನಡೆಯುತ್ತಿವೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ದೇಶದಲ್ಲಿ 'ಪಿತ್ರಾರ್ಜಿತ ಆಸ್ತಿ ತೆರಿಗೆ' ಜಾರಿಗೆ ತರಲಿದೆ. ಈ...