Homeಮುಖಪುಟಮಹಾ ಮತ್ತು ಬುಲ್ ಬುಲ್ ಚಂಡಮಾರುತ ಸಾಧ್ಯತೆ: ನಾಲ್ಕು ರಾಜ್ಯಗಳಲ್ಲಿ ಹೈ ಅಲರ್ಟ್‌

ಮಹಾ ಮತ್ತು ಬುಲ್ ಬುಲ್ ಚಂಡಮಾರುತ ಸಾಧ್ಯತೆ: ನಾಲ್ಕು ರಾಜ್ಯಗಳಲ್ಲಿ ಹೈ ಅಲರ್ಟ್‌

- Advertisement -
- Advertisement -

ಅರಬ್ಬೀ ಸಮುದ್ರ ಮತ್ತು ಬಂಗಾಳಕೊಲ್ಲಿಯಲ್ಲಿ ಮಹಾ ಮತ್ತು ಬುಲ್ ಬುಲ್ ಎಂಬ ಎರಡು ಚಂಡಮಾರುತಗಳು ಅಪ್ಪಳಿಸುವ ಸಾಧ್ಯತೆ ದಟ್ಟವಾಗಿದೆ. ಈ ಹಿನ್ನೆಲೆ ಗುಜರಾತ್, ಪಶ್ಚಿಮ ಬಂಗಾಳ, ಒಡಿಶಾ, ಮಹಾರಾಷ್ಟ್ರಗಳಲ್ಲಿ ಕಟ್ಟೆಚ್ಚರ ವಹಿಸುವಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಪಶ್ಚಿಮ ಕರಾವಳಿಗೆ ’ಮಹಾ’ ಚಂಡಮಾರುತ ಅಪ್ಪಳಿಸಲಿದ್ದು, ಗುಜರಾತ್ ಹಾಗೂ ಮಹಾರಾಷ್ಟ್ರಗಳ ಮೇಲೆ ಹೆಚ್ಚು ಪ್ರಭಾವ ಬೀರಲಿದೆ. ಪೂರ್ವ ಕರಾವಳಿಯತ್ತ’ಬುಲ್ ಬುಲ್’ ಚಂಡಮಾರುತ ಬೀಸಲಿದ್ದು, ಬಂಗಾಳ ಮತ್ತು ಒಡಿಶಾ ರಾಜ್ಯಗಳಲ್ಲಿ ಹಾನಿಯುಂಟು ಮಾಡಲಿದೆ ಎಂದು ಹವಾಮಾನ ಇಲಾಖೆ ವರದಿ ನೀಡಿದೆ.

ಮುಂದಿನ 12 ಗಂಟೆಗಳಲ್ಲಿ ಬುಲ್ ಬುಲ್ ಚಂಡಮಾರುತ ತೀವ್ರಗೊಳ್ಳುವ ಸಾಧ್ಯತೆಯಿದೆ. ಪಶ್ಚಿಮ ಬಂಗಾಳ, ಒಡಿಶಾ, ಮಹಾರಾಷ್ಟ್ರಗಳಲ್ಲಿ ಭಾರಿ ಮಳೆಯಾಗಲಿದೆ. ಒಡಿಶಾಗೆ ಚಂಡಮಾರುತ ಅಪ್ಪಳಿಸುವುದಿಲ್ಲ ಆದರೆ ಭಾರಿ ಮಳೆಯಾಗಲಿದೆ. ಚಂಡಮಾರುತ ಒಡಿಶಾಸ ಪರಾದೀಪ್ ನ ಆಗ್ನೇಯ ದಿಕ್ಕಿನಲ್ಲಿ 770 ಕಿ.ಮೀ ದೂರದಲ್ಲಿ ಸಂಭವಿಸಲಿದೆ. ಇದು ಪಶ್ಚಿಮ ಬಂಗಾಳ ಮತ್ತು ಬಾಂಗ್ಲಾದೇಶದತ್ತ ಹಾದು ಹೋಗಲಿದೆ.

ಒಡಿಶಾ ಸರ್ಕಾರ ಎಚ್ಚರಿಕೆ ನೀಡಿದ್ದು, ಮುಂಜಾಗ್ರತೆ ವಹಿಸುವಂತೆ ತಿಳಿಸಿದೆ. ಎಲ್ಲಾ ಜಿಲ್ಲೆಗಳಲ್ಲೂ ಸುರಕ್ಷತೆ ಕ್ರಮ ತೆಗೆದುಕೊಳ್ಳುವಂತೆ ಮತ್ತು ಸೈಕ್ಲೋನ್ ಭೀಕರತೆ ಮತ್ತು ಹಾನಿ ಬಗ್ಗೆ ತಿಳಿಸುವಂತೆ ಹೇಳಿದೆ. ಪಶ್ಚಿಮ ಬಂಗಾಳದಲ್ಲಿ ನವೆಂಬರ್ 10 ಮತ್ತು 11ರಂದು ಹೆಚ್ಚು ಮಳೆಯಾಗಲಿದೆ. 40ರಿಂದ 50 ಕೀ.ಮಿ ನಷ್ಟು ವೇಗದಲ್ಲಿ ಗಾಳಿ ಬೀಸಲಿದ್ದು, ಕ್ರಮೇಣ ವೇಗ ಹೆಚ್ಚಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಇನ್ನು ಮಹಾ ಚಂಡಮಾರುತವು ಮಹಾರಾಷ್ಟ್ರ, ಮಧ್ಯ ಮಹಾರಾಷ್ಟ್ರ, ಥಾಣೆ, ಪಲ್ಗಾಹಾರ್ ಗಳಲ್ಲಿ ಹೆಚ್ಚಿನ ಹಾನಿಯುಂಟು ಮಾಡಲಿದೆ. ದಿಯುನ ದಕ್ಷಿಣ ಭಾಗದಲ್ಲಿ ಹಾದು ಹೋಗಲಿರುವ ಸೈಕ್ಲೋನ್, 180 ರಷ್ಟು ವೇಗದಲ್ಲಿ ಚಲಿಸಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮೋದಿ ದ್ವೇಷ ಭಾಷಣದ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದ ಬಿಜೆಪಿ ಜಿಲ್ಲಾಧ್ಯಕ್ಷ ಪಕ್ಷದಿಂದಲೇ ಉಚ್ಚಾಟನೆ!

0
ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮರ ವಿರುದ್ಧ ಮಾಡಿರುವ ದ್ವೇಷ ಭಾಷಣದ ಬಗ್ಗೆ ಮಾಧ್ಯಮವೊಂದರಲ್ಲಿ ತನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದಕ್ಕೆ ರಾಜಸ್ಥಾನದ ಬಿಕಾನೇರ್ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾಧ್ಯಕ್ಷನನ್ನು ಪಕ್ಷದಿಂದಲೇ ಉಚ್ಚಾಟಿಸಲಾಗಿದೆ. ಈ ವಿಚಾರ ಈಗ...