HomeUncategorizedಭಾರತದ ಆರ್ಥಿಕ ಮತ್ತು ತಂತ್ರಜ್ಞಾನದ ಬೆಳವಣಿಗೆಗೆ ಮನಮೋಹನ್ ಸಿಂಗ್, ಚಿದಂಬರಂ ಕೊಡುಗೆ ದೊಡ್ಡದು: ಇನ್ಫೋಸಿಸ್ ನಾರಾಯಣಮೂರ್ತಿ

ಭಾರತದ ಆರ್ಥಿಕ ಮತ್ತು ತಂತ್ರಜ್ಞಾನದ ಬೆಳವಣಿಗೆಗೆ ಮನಮೋಹನ್ ಸಿಂಗ್, ಚಿದಂಬರಂ ಕೊಡುಗೆ ದೊಡ್ಡದು: ಇನ್ಫೋಸಿಸ್ ನಾರಾಯಣಮೂರ್ತಿ

- Advertisement -
- Advertisement -

ಭಾರತದ ಆರ್ಥಿಕ ಮತ್ತು ತಂತ್ರಜ್ಞಾನದ ಬೆಳವಣಿಗೆಗೆ ಮನಮೋಹನ್ ಸಿಂಗ್, ಚಿದಂಬರಂ ಕೊಡುಗೆ ದೊಡ್ಡದು ಎಂದು ಇನ್ಫೋಸಿಸ್ ಮುಖ್ಯಸ್ಥ ನಾರಾಯಣಮೂರ್ತಿ ಹೇಳಿದ್ದಾರೆ.

ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ ಅವರು ಪಿ.ವಿ ನರಸಿಂಹರಾವ್, ಡಾ.ಮನಮೋಹನ್ ಸಿಂಗ್, ಮಾಂಟೆಕ್ ಸಿಂಗ್ ಅಹ್ಲುವಾಲಿಯ ಮತ್ತು ಪಿ.ಚಿದಬರಂ ಇವರು ಭಾರತದ ಆರ್ಥಿಕತೆಯ ಶಿಲ್ಪಿಗಳಾಗಿದ್ದಾರೆ ಎಂದು ಬಣ್ಣಿಸಿದ್ದಾರೆ.

ನಾವು 45 ವರ್ಷಗಳಿಂದ ನಿರ್ವಹಿಸಲಾಗದ್ದನ್ನು ಅವರು ಕೇವಲ ಒಂದು ವಾರದಲ್ಲಿ ಸಾಧಿಸಿದರು ಎಂದು ಹೊಗಳಿದ್ದಾರೆ.

ಇನ್ಫೋಸಿಸ್ ಮುಖ್ಯಸ್ಥ ನಾರಾಯಣಮೂರ್ತಿರವರ ಈ ಹೇಳಿಕೆ ಎಕಾನಾಮಿಕ್ಸ್ ಟೈಮ್ಸ್ ನಲ್ಲಿ ಪ್ರಕಟಗೊಳ್ಳುತ್ತಲೇ ಸಾಕಷ್ಟು ವೈರಲ್ ಆಗಿದೆ. ಬಹಳಷ್ಟು ಜನ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಮುಖ್ಯವಾಗಿ ಈ ಹೇಳಿಕೆ ಆರ್ಥಿಕ ಕುಸಿತವುಂಟಾಗಿರುವ ಈ ಸಂದರ್ಭದಲ್ಲಿ ಪರೋಕ್ಷವಾಗಿ ಮೋದಿ ಸರ್ಕಾರದ ವಿರುದ್ಧವಾಗಿದ್ದು ಹಿಂದಿನ ಯು.ಪಿ.ಎ ಸರ್ಕಾರದ ಪರವಾಗಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

ಆರ್ಥಿಕ ಕುಸಿತದ ವಿರುದ್ಧ ಬಹಳಷ್ಟು ಉದ್ಯಮಿಗಳು ಬಹಿರಂಗ ಹೇಳಿಕೆಗಳನ್ನು ಕೊಡುತ್ತಿರುವ ಹಿನ್ನೆಲೆಯಲ್ಲಿ ನಾರಾಯಣ ಮೂರ್ತಿಯವರ ಹೇಳಿಕೆಗೆ ಸಾಕಷ್ಟು ಮಹತ್ವ ಲಭಿಸಿದೆ.

 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

LEAVE A REPLY

Please enter your comment!
Please enter your name here

- Advertisment -

Must Read

FACT CHECK : ಸಿದ್ದರಾಮಯ್ಯ ಸರ್ಕಾರ ಮುಸ್ಲಿಮರನ್ನು ಒಬಿಸಿ ಪಟ್ಟಿಗೆ ಸೇರಿಸಿದ್ದು ನಿಜಾನಾ?

0
ಕರ್ನಾಟಕದಲ್ಲಿ ಮುಸ್ಲಿಮರನ್ನು ಹಿಂದುಳಿದ ವರ್ಗಕ್ಕೆ ಸೇರಿಸುವ ಮೂಲಕ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಹಿಂದುಳಿದ ವರ್ಗಗಳ 36 ಜಾತಿಗಳಿಗೆ ಅನ್ಯಾಯ ಮಾಡಿದೆ ಎಂದು ಬಿಜೆಪಿ ಆರೋಪಿಸಿದೆ. ಸಿದ್ದರಾಮಯ್ಯ ಸರ್ಕಾರ ಹಿಂದುಳಿದ ವರ್ಗಗಳಿಗೆ...