HomeಚಳವಳಿCAA, NRC ಕುರಿತು ಮೋದಿ-ಶಾ ಸುಳ್ಳು ಹೇಳಿ ದಾರಿ ತಪ್ಪಿಸುತ್ತಿದ್ದಾರೆ: ಸಿದ್ದರಾಮಯ್ಯ

CAA, NRC ಕುರಿತು ಮೋದಿ-ಶಾ ಸುಳ್ಳು ಹೇಳಿ ದಾರಿ ತಪ್ಪಿಸುತ್ತಿದ್ದಾರೆ: ಸಿದ್ದರಾಮಯ್ಯ

- Advertisement -
- Advertisement -

ಸಿಎಎ ಇಂದ ದೇಶದ ಯಾವೊಬ್ಬ ಪ್ರಜೆಗೂ ತೊಂದರೆ ಇಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಸುಳ್ಳು ಹೇಳಿ ಜನರ ದಾರಿ ತಪ್ಪಿಸುತ್ತಿದ್ದಾರೆ. ಸಿಎಎ, ಎನ್‌ಆರ್‌ಸಿ ಹಾಗೂ ಎನ್‌ಪಿಆರ್ ಇವು ಒಂದಕ್ಕೊಂದು ಸಂಬಂಧ ಹೊಂದಿವೆ. ಇವು ಒಂದು ಸಮುದಾಯದ ಜನರನ್ನು ಮಾತ್ರ ಗುರಿಯಾಗಿರಿಸಿಕೊಂಡು ಜಾರಿಗೆ ತರಲಾಗುತ್ತಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಪ್ರತಿಕಾಗೋಷ್ಟಿ ಉದ್ದೇಶಿಸಿ ಮಾತನಾಡಿದ ಅವರು, ಹೊರದೇಶಗಳಲ್ಲಿ ದೌರ್ಜನ್ಯಕ್ಕೊಳಗಾದ ಜನರಿಗೆ ಭಾರತದ ಪೌರತ್ವ ಕೊಡುವುದಕ್ಕಾಗಲೀ, ಇಲ್ಲಿನ ಅಕ್ರಮ ವಲಸಿಗರಿಗೆ ಪೌರತ್ವ ನೀಡಿ ಅವರನ್ನು ಈ ದೇಶದ ಪ್ರಜೆಗಳಾಗಿಸುವುದಕ್ಕಾಗಲೀ‌ ನಮ್ಮ ವಿರೋಧವಿಲ್ಲ. ಹೀಗೆ ಪೌರತ್ವ ನೀಡುವುದರಲ್ಲಿ ಮುಸ್ಲಿಂ ಸಮುದಾಯವನ್ನು ಹೊರಗಿಟ್ಟು ನಿಯಮ ಜಾರಿಗೊಳಿಸಲು ಹೊರಟಿರುವುದಕ್ಕಷ್ಟೇ ನಮ್ಮ ವಿರೋಧ. 2014 ಡಿಸೆಂಬರ್ 31ರ ಮುಂಚೆ ಪಾಕಿಸ್ತಾನ, ಬಾಂಗ್ಲಾದೇಶ ಹಾಗೂ ಆಫ್ಘಾನಿಸ್ತಾನದಿಂದ ಬಂದ ಮುಸ್ಲಿಂ ಹೊರತಾದ ಧರ್ಮಗಳ ಜನರಿಗೆ ಪೌರತ್ವ ನೀಡುವುದೇನೋ‌ ಸರಿ, ಆದರೆ ಶ್ರೀಲಂಕಾ, ನೇಪಾಳ, ಮ್ಯಾನ್ಮಾರ್, ಭೂತಾನ್ ಈ ದೇಶಗಳಿಂದ ಭಾರತಕ್ಕೆ ವಲಸೆ ಬಂದವರನ್ನು ಈ ಕಾಯ್ದೆಯಿಂದ ಹೊರಗಿಡಲು ಕಾರಣವೇನು? ಎಂದು ಪ್ರಶ್ನಿಸಿದ್ದಾರೆ.

ಸಂವಿಧಾನ ರಚನಾ ಸಮಿತಿಯ 289 ಜನ ಸದಸ್ಯರಲ್ಲಿ ಆರ್‌ಎಸ್‌ಎಸ್ ಸಂಘಪರಿವಾರದವರು ಇದ್ದರು. ಮನುಸ್ಮೃತಿ ಆಧಾರದ ಮೇಲೆ ಸಂವಿಧಾನ ರಚನೆಯಾಗಬೇಕೆಂಬುದು ಅವರ ಆಲೋಚನೆಯಾಗಿತ್ತು, ಅಂದು ಈ ಆಲೋಚನೆಗೆ ಅವಕಾಶ ಸಿಗಲಿಲ್ಲ ಹಾಗಾಗಿ ಇಂದು ಅದನ್ನು ಕಾಯ್ದೆ ರೂಪದಲ್ಲಿ ಜಾರಿಮಾಡಲು ಹೊರಟಿದ್ದಾರೆ ಎಂದು ಸಿದ್ದರಾಮಯ್ಯ ಕಿಡಿಕಾರಿದರು.

ಒಂದು ಕಾಯ್ದೆ ಸಂಸತ್ತಿನ ಬಹುಮತ ಗಳಿಸಿ ಕಾನೂನಾಗಿ ಜಾರಿಗೆ ಬರಲು ಸಿದ್ಧವಾದರೂ, ಆ ಕಾನೂನು ನ್ಯಾಯಸಮ್ಮತವಲ್ಲ ಎಂದೆನಿದರೆ ಜೈಲಿಗೆ ಹೋದರೂ ಪರವಾಗಿಲ್ಲ ಅದಕ್ಕೆ ಅಸಹಕಾರ ತೋರಿ ಎಂದು ಮಹಾತ್ಮ ಗಾಂಧಿಯವರೇ ಹೇಳಿದ್ದರು. ರವೀಂದ್ರನಾಥ್ ಠಾಗೋರ್ ಅವರು ಭಾರತ ಸರ್ವಧರ್ಮ ಸಹಿಷ್ಣು ದೇಶವಾಗಬೇಕು, ಮುಕ್ತವಾದ ಶಿಕ್ಷಣ ಮತ್ತು ಅಭಿವ್ಯಕ್ತಿಗೆ ಅವಕಾಶಗಳಿರಬೇಕು, ಇಲ್ಲಿನ ಪ್ರತಿ ಪ್ರಜೆ ಧೈರ್ಯದಿಂದ, ಸ್ವಾಭಿಮಾನದ ಬದುಕು ಬಾಳಬೇಕು ಎಂದು ಹೇಳಿದ್ದರು, ಆದರೆ ಬಿಜೆಪಿ ಹಿಂದೂ ರಾಷ್ಟ್ರ ನಿರ್ಮಾಣದ ಹುನ್ನಾರದೊಂದಿಗೆ ಕಾಯ್ದೆ ಜಾರಿಗೆ ಮುಂದಾಗಿದೆ ಎಂದು ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದರು.

ಕಾಯ್ದೆಯ ವಿರುದ್ಧ ದೇಶವ್ಯಾಪಿ ಜನರು ಬೀದಿಗಿಳಿದು ಪ್ರತಿಭಟಿಸುತ್ತಿದ್ದಾರೆ. ಅವರಲ್ಲಿ ಬರೀ ಮುಸ್ಲಿಮರಷ್ಟೇ ಅಲ್ಲ, ವಿದ್ಯಾರ್ಥಿಗಳು, ಕಾರ್ಮಿಕರು, ಪ್ರಗತಿಪರರು, ಮಹಿಳೆಯರು ಹೀಗೆ ಎಲ್ಲ ವರ್ಗದ ಜನರು ಇದ್ದಾರೆ. ಕಾಯ್ದೆ ಜಾರಿಯಿಂದ ಮುಸ್ಲಿಂಮರಿಗೆ ಮಾತ್ರವಲ್ಲ, ಆದಿವಾಸಿಗಳು, ಬುಡಕಟ್ಟು ಜನಾಂಗದವರಿಗೂ ತೊಂದರೆ ತಪ್ಪಿದ್ದಲ್ಲ ಎಂದು ಅವರು ಹೇಳಿದರು.

ಮನುಸ್ಮೃತಿಯನ್ನು ಬೆಂಬಲಿಸುತ್ತಾ,ದಲಿತರು, ಹಿಂದುಳಿದವರನ್ನು ಅಸ್ಪೃಶ್ಯರನ್ನಾಗಿ ಮಾಡಿ, ಸಮಾಜದಿಂದ ದೂರ ಇಟ್ಟು, ನಮ್ಮದು ಅಖಂಡ ಹಿಂದುತ್ವ, ‘ಸರ್ವೇ ಜನಾಃ ಸುಖಿನೋ ಭವಂತು’ ಅಂದುಬಿಟ್ರೆ ಅದನ್ನು ನಂಬುವಷ್ಟು ಜನ ಮೂರ್ಖರಲ್ಲ. ಸರ್ಕಾರ ಮೊದಲು ಈಗಿರುವ ಸಾಮಾಜಿಕ, ಆರ್ಥಿಕ ಸಮಸ್ಯೆಗಳನ್ನು ಬಗೆಹರಿಸಲಿ, ಮತ್ತೆ ಉಳಿದದ್ದು ನೋಡೋಣ ಎಂದು ಅವರು ಸವಾಲು ಹಾಕಿದರು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರಧಾನಿ ಮೋದಿ ವಿರುದ್ಧ ಕ್ರಮ ಕೈಗೊಳ್ಳುವಂತೆ ನಾಗರಿಕ ಸಂಸ್ಥೆಗಳು, ಕಾಳಜಿಯುಳ್ಳ ನಾಗರಿಕರಿಂದ ಚುನಾವಣಾ ಆಯೋಗಕ್ಕೆ...

0
ರಾಜಸ್ಥಾನದಲ್ಲಿ ಭಾನುವಾರ (ಏ.21) ನಡೆದ ಚುನಾವಣಾ ರ‍್ಯಾಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಸುಳ್ಳು ಸುದ್ದಿ ಮತ್ತು ದ್ವೇಷ ಹರಡಿದ್ದಾರೆ. ಈ ಹಿನ್ನೆಲೆ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ನಾಗರಿಕ ಸಂಸ್ಥೆಗಳು...