Homeಮುಖಪುಟರಾಜಸ್ಥಾನ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ಫಲಿತಾಂಶ: ಗೆದ್ದು ಬೀಗಿದ ಕಾಂಗ್ರೆಸ್

ರಾಜಸ್ಥಾನ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ಫಲಿತಾಂಶ: ಗೆದ್ದು ಬೀಗಿದ ಕಾಂಗ್ರೆಸ್

- Advertisement -
- Advertisement -

ರಾಜಸ್ಥಾನದ ನಗರ ಸ್ಥಳೀಯ ಸಂಸ್ಥೆಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದು ಬೀಗಿದೆ. 17 ಪುರಸಭೆಗಳಲ್ಲಿ 11 ರಲ್ಲಿ ಕಾಂಗ್ರೆಸ್ ಜಯ ದಾಖಲಿಸಿದೆ. ಬಿಜೆಪಿ ಕೇವಲ ಮೂರು ಪುರಸಭೆಗಳನ್ನು ಗೆದ್ದಿದೆ. ಇನ್ನುಳಿದ ಮೂರು ಸ್ಥಾನಗಳನ್ನು ಸ್ವತಂತ್ರ ಅಭ್ಯರ್ಥಿಗಳು ಗೆದ್ದುಕೊಂಡಿದ್ದಾರೆ.

29 ಪುರಸಭೆಗಳಲ್ಲಿ ಕಾಂಗ್ರೆಸ್ 15 ಗೆದ್ದರೆ, ಬಿಜೆಪಿ 6, 8 ಸ್ಥಾನಗಳನ್ನು ಸ್ವತಂತ್ರ ಅಭ್ಯರ್ಥಿಗಳು ಗೆದ್ದಿದ್ದಾರೆ. ಸ್ಥಳೀಯ ಸಂಸ್ಥೆಗಳ ಚುನಾವಣೆ ಗೆಲುವಿನ ಬಗ್ಗೆ ಸಿಎಂ ಅಶೋಕ್ ಗೆಹ್ಲೋಟ್ ಪ್ರತಿಕ್ರಿಯಿಸಿ, ‘ಕಾಂಗ್ರೆಸ್ ನಿರೀಕ್ಷಿಸಿದಂತೆ ಫಲಿತಾಂಶ ಬಂದಿದೆ. ನಮ್ಮ ಸರ್ಕಾರದ ಕಾರ್ಯಕ್ಷಮತೆಯನ್ನು ಪರಿಗಣಿಸಿ, ಜನರು ನಮ್ಮನ್ನು ಗೆಲ್ಲಿಸಿರುವುದು ಮತ್ತು ಜನಾದೇಶ ಸಂತಸ ತಂದಿದೆ’ ಎಂದು ಹೇಳಿದರು.

ಕಾಂಗ್ರೆಸ್ ಮುಖಂಡ ಮತ್ತು ರಾಜ್ಯ ಸಚಿವ ಪ್ರತಾಪ್ ಸಿಂಗ್ ಖಚರಿಯಾವಾಸ್ ಮಾತನಾಡಿ, ರಾಜಸ್ಥಾನದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಕಾಂಗ್ರೆಸ್ ಮೂರನೇ ಎರಡರಷ್ಟು ಸ್ಥಾನಗಳನ್ನು ಗೆದ್ದಿದೆ. ಫಲಿತಾಂಶ ಬಿಜೆಪಿಗೆ ಪಾಠ ಕಲಿಸಿದೆ. 370 ನೇ ವಿಧಿ ಮತ್ತು ರಾಮಮಂದಿರ ದೇವಾಲಯದಂತಹ ವಿಷಯಗಳಿಂದಾಗಿ ಜನರು ಬಿಜೆಪಿಯನ್ನು ತಿರಸ್ಕರಿಸಿದ್ದಾರೆ ಎಂದು ಹೇಳಿದರು.

2018 ರಲ್ಲಿ ಬಿಜೆಪಿಯನ್ನು ಮಣಿಸಿ ರಾಜಸ್ಥಾನದಲ್ಲಿ ಕಾಂಗ್ರೆಸ್ ಆಡಳಿತ ಚುಕ್ಕಾಣಿ ಹಿಡಿಯಿತು. ಆದರೆ 2019 ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ 25 ಸ್ಥಾನಗಳನ್ನು ಗೆದ್ದಿತು. ಇಂದು ಬೆಳಗ್ಗೆ ರಾಜಸ್ಥಾನದ 49 ನಗರ ಸ್ಥಳೀಯ ಸಂಸ್ಥೆಗಳ ಚುನಾವಣಾ ಮತ ಎಣಿಕೆ ಆರಂಭವಾಯಿಗಿ, ಕಾಂಗ್ರೆಸ್ ಗೆಲುವು ಕಂಡಿದೆ. ಇನ್ನು ನಗರ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಆಯ್ಕೆ ನವೆಂಬರ್ 26 ಮತ್ತು 27 ರಂದು ನಡೆಯಲಿದೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕೋವಿಡ್ ಭ್ರಷ್ಟ ಸುಧಾಕರ್ ಪರವಾಗಿ ಮತ ಕೇಳಲು ಪ್ರಧಾನಿ ಮೋದಿ ಚಿಕ್ಕಬಳ್ಳಾಪುರಕ್ಕೆ ಬರುತ್ತಿದ್ದಾರೆ :...

0
ಪ್ರಧಾನಿ ಮೋದಿಯವರು ಹತ್ತು ವರ್ಷದಲ್ಲಿ ಕೊಟ್ಟ ಒಂದೂ ಆಶ್ವಾಸನೆಯನ್ನೂ ಈಡೇರಿಸದೆ ಭಾರತೀಯರ ನಂಬಿಕೆಗಳಿಗೆ ದ್ರೋಹ ಬಗೆದಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಾಗೇಪಲ್ಲಿಯಲ್ಲಿ ನಡೆದ ಪ್ರಜಾಧ್ವನಿ-2 ಬೃಹತ್ ಜನ ಸಮಾವೇಶದಲ್ಲಿ...