Homeಮುಖಪುಟನಿವೃತ್ತ ಮುಖ್ಯ ಚುನಾವಣಾ ಆಯುಕ್ತ ಟಿ.ಎನ್.ಶೇಷನ್ ನಿಧನ: ಗಣ್ಯರ ಸಂತಾಪ

ನಿವೃತ್ತ ಮುಖ್ಯ ಚುನಾವಣಾ ಆಯುಕ್ತ ಟಿ.ಎನ್.ಶೇಷನ್ ನಿಧನ: ಗಣ್ಯರ ಸಂತಾಪ

- Advertisement -
- Advertisement -

ನಿವೃತ್ತ ಮುಖ್ಯ ಚುನಾವಣಾ ಆಯುಕ್ತ ಟಿ.ಎನ್.ಶೇಷನ್ ನಿನ್ನೆ ರಾತ್ರಿ ಚೆನ್ನೈನ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ. 86 ವರ್ಷದ ಶೇಷನ್ ಹೃದಯಾಘಾತದಿಂದ ಇಹಲೋಕ ತ್ಯಜಿಸಿದ್ದಾರೆ. ಅನೇಕ ವರ್ಷಗಳಿಂದ ಶೇಷನ್ ಅನಾರೋಗ್ಯದಿಂದ ಬಳಲುತ್ತಿದ್ದರು.

1990ರಿಂದ 1996ವರೆಗೆ 10 ನೇ ಮುಖ್ಯ ಚುನಾವಣಾ ಆಯುಕ್ತರಾಗಿ ನೇಮಕಗೊಂಡಿದ್ದಶೇಷನ್, ಹಲವು ಸುಧಾರಣಾ ಪ್ರಕ್ರಿಯೆಗಳ ಮೂಲಕ ಚುನಾವಣಾ ಆಯೋಗಕ್ಕೆ ಹೊಸ ಆಯಾಮ ನೀಡಿದ್ದರು. ಚುನಾವಣಾ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ತರಲು ಶ್ರಮಿಸಿದ್ದರು. ಅಲ್ಲದೇ ಆಯೋಗದ ಕಾರ್ಯಶೈಲಿಯನ್ನು ಬದಲಾವಣೆ ಮಾಡಿ, ದೇಶದ ಗಮನ ಸೆಳೆದಿದ್ದರು. ಮಾದರಿ ನೀತಿಸಂಹಿತೆಯನ್ನು ಕಟ್ಟುನಿಟ್ಟಾಗಿ ಜಾರಿ ಮಾಡಿದ್ದ ಕ್ರಮದಿಂದ ರಾಜಕಾರಣಿಗಳ ಆಕ್ರೋಶಕ್ಕೂ ಗುರಿಯಾಗಿದ್ದರು.

ಕೇರಳದ ಪಾಲಕ್ಕಾಡ್‍ನಲ್ಲಿ 1932 ಡಿಸೆಂಬರ್ 5ರಂದು ಶೇಷನ್ ಜನಿಸಿದರು. 1997ರಲ್ಲಿ ರಾಷ್ಟ್ರಪತಿ ಚುನಾವಣೆಯಲ್ಲಿ ಸ್ಪರ್ಧಿಸಿ, ಪರಾಭವಗೊಂಡಿದ್ದರು.  ಚುನಾವಣಾ ಸುಧಾರಣೆಗೆ ಶ್ರಮಿಸಿದ್ದ ಶೇಷನ್ ಅವರಿಗೆ ಪ್ರತಿಷ್ಠಿತ ರೋಮನ್ ಮ್ಯಾಗ್ಸೆಸ್ಸೆ ಪ್ರಶಸ್ತಿ ಸಹ ದೊರೆತಿತ್ತು.

ಇನ್ನು ಶೇಷನ್ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ, ಪ.ಬಂಗಾಳ ಸಿಎಂ ಮಮತಾ ಬ್ಯಾನರ್ಜಿ, ನಿತಿನ್ ಗಡ್ಕರಿ, ಅಮಿತ್ ಶಾ, ರಾಹುಲ್ ಗಾಂಧಿ ಸೇರಿದಂತೆ ಹಲವು ನಾಯಕರು ಸಂತಾಪ ಸೂಚಿಸಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

FACT CHECK: ಜಾತಿ ಗಣತಿ ಕುರಿತ ರಾಹುಲ್ ಗಾಂಧಿಯ ವೈರಲ್ ಕ್ಲಿಪ್ ಎಡಿಟೆಡ್

0
ಸಾಮಾಜಿಕ-ಆರ್ಥಿಕ ಮತ್ತು ಜಾತಿ ಗಣತಿಗೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಾಡಿರುವ ಭಾಷಣದ ಕ್ಲಿಪ್‌ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಅನೇಕ ಬಾರಿ ಸುಳ್ಳು ಸುದ್ದಿಗಳನ್ನು ಹಂಚಿಕೊಂಡಿರುವ ಬಲ ಪಂಥೀಯ ಎಕ್ಸ್...