HomeUncategorizedಶಾಸಕಾಂಗ ಪಕ್ಷದ ನಾಯಕನ ಅಧಿಕಾರಕ್ಕೆ ರಕ್ಷಣೆ ನೀಡಿದ್ದೀರಿ, "ಥ್ಯಾಂಕ್ಯೂ ಸ್ಪೀಕರ್"- ಸಿದ್ದರಾಮಯ್ಯ

ಶಾಸಕಾಂಗ ಪಕ್ಷದ ನಾಯಕನ ಅಧಿಕಾರಕ್ಕೆ ರಕ್ಷಣೆ ನೀಡಿದ್ದೀರಿ, “ಥ್ಯಾಂಕ್ಯೂ ಸ್ಪೀಕರ್”- ಸಿದ್ದರಾಮಯ್ಯ

- Advertisement -
- Advertisement -

ವಿಪ್ ನೀಡಿಕೆಯ ಹಕ್ಕು ಸೇರಿದಂತೆ ಶಾಸಕಾಂಗ ಪಕ್ಷದ ನಾಯಕನ ಅಧಿಕಾರಕ್ಕೆ ರಕ್ಷಣೆ ನೀಡಿದ ಸಭಾಧ್ಯಕ್ಷರ ತೀರ್ಮಾನವನ್ನು ನಾನು ಸ್ವಾಗತಿಸುತ್ತೇನೆ ಮತ್ತು ಅವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಮಾಜಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಈ ಕುರಿತು ಅವರು ಫೇಸ್ ಬುಕ್ ನಲ್ಲಿ ಹೀಗೆ ಬರೆದಿದ್ದಾರೆ.

“ರಾಜ್ಯದ ೧೫ ಶಾಸಕರ ಅರ್ಜಿಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ನೀಡಿದ ಮಧ್ಯಂತರ ಆದೇಶದಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ ನಮ್ಮ ಪಕ್ಷದ ಸದಸ್ಯರಿಗೆ ವಿಪ್ ನೀಡುವ ನನ್ನ ಹಕ್ಕನ್ನು ಹತ್ತಿಕ್ಕಿದಂತೆ ಕಾಣುತ್ತಿದೆ. ಈ ಬಗ್ಗೆ ಸಭಾಧ್ಯಕ್ಷರು ಸ್ಪಷ್ಟೀಕರಣ ನೀಡಬೇಕು.

ಸುಪ್ರೀಂಕೋರ್ಟ್ ನೀಡಿದ್ದ ಮಧ್ಯಂತರ ಆದೇಶದಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾದ ನನ್ನ ಅಧಿಕಾರದ ಬಗ್ಗೆ ಪರೋಕ್ಷವಾಗಿ ಪ್ರಸ್ತಾಪವಾಗಿದೆ. ಆ ಪ್ರಕರಣದಲ್ಲಿ ನಾನು ಪ್ರತಿವಾದಿ ಆಗದೆ ಇರುವ ಕಾರಣ ನನ್ನ ಅಭಿಪ್ರಾಯ ಮಂಡಿಸಲು ಸಾಧ್ಯವಾಗಿಲ್ಲ. ಪಕ್ಷಾಂತರ ನಿಷೇಧ ಕಾಯ್ದೆಯ ಮೂಲ ಆಶಯ ಈಡೇರಬೇಕಾದರೆ, ಶಾಸಕಾಂಗ ಪಕ್ಷದ ನಾಯಕರಿಗೆ ತಮ್ಮ ಪಕ್ಷದ ಸದಸ್ಯರಿಗೆ ವಿಪ್ ನೀಡಲು ಅವಕಾಶ ಇರಲೇಬೇಕು.”

ಸದನದಲ್ಲಿ ಚರ್ಚೆ ನಡೆಯುತ್ತಿದ್ದು ಸ್ಪೀಕರ್ ಯಾವ ರೂಲಿಂಗ್ ಕೊಡುತ್ತಾರೆ ಎಂಬುದರ ಮೇಲೆ ಎಲ್ಲರ ಕಣ್ಣಿದೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಜೆಪಿಗೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ: ಕಾಂಗ್ರೆಸ್ ಸೇರ್ಪಡೆ ಸಾಧ್ಯತೆ

0
ಲೋಕಸಭೆ ಚುನಾವಣೆಯಲ್ಲಿ ಕೊಪ್ಪಳ ಕ್ಷೇತ್ರದ ಟಿಕೆಟ್‌ ಕೈತಪ್ಪಿದ ಹಿನ್ನೆಲೆ ಬಿಜೆಪಿ ವಿರುದ್ದ ಮುನಿಸಿಕೊಂಡಿದ್ದ ಹಾಲಿ ಸಂಸದ ಸಂಗಣ್ಣ ಕರಡಿ ಅವರು ತಮ್ಮ ಸಂಸದ ಸ್ಥಾನಕ್ಕೆ ಮತ್ತು ಬಿಜೆಪಿ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ...