Homeಕರ್ನಾಟಕಸಿದ್ದರಾಮಯ್ಯ ದೇಶದ್ರೋಹಿ ಎಂದ ಸೊಗಡು, ಸಿ.ಟಿ.ರವಿ ವಿರುದ್ಧ ಸಿಡಿದೆದ್ದ ಕುರುಬ ಸಮುದಾಯ

ಸಿದ್ದರಾಮಯ್ಯ ದೇಶದ್ರೋಹಿ ಎಂದ ಸೊಗಡು, ಸಿ.ಟಿ.ರವಿ ವಿರುದ್ಧ ಸಿಡಿದೆದ್ದ ಕುರುಬ ಸಮುದಾಯ

- Advertisement -
- Advertisement -

ಮಾಜಿ ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ದೇಶದ್ರೋಹಿ ಎಂದು ಕರೆದಿರುವ ಬಿಜೆಪಿ ಮುಖಂಡರ ವಿರುದ್ಧ ಕುರುಬ ಸಮುದಾಯ ಹಾಗೂ ಸಂಘಟನೆಗಳ ನೂರಾರು ಮಂದಿ ತುಮಕೂರಿನಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿ, ಆಕ್ರೋಶ ವ್ಯಕ್ತಪಡಿಸಿದರು.

ಸಾರ್ವಕರ್ ಅವರು ಗಾಂಧೀ ಕೊಲೆಯ ಆರೋಪಿಗಳಲ್ಲಿ ಒಬ್ಬರಾಗಿದ್ದರು ಎಂದು ಹೇಳಿದ್ದ ಸಿದ್ದರಾಮಯ್ಯ ಹೇಳಿಕೆಗೆ ಸೊಗಡು ಶಿವಣ್ಣ ಪ್ರತಿಕ್ರಿಯಿಸಿ, ಸಿದ್ದರಾಮಯ್ಯ ದೇಶದ್ರೋಹಿ. ಮುಂದೆ ಸಿದ್ದರಾಮನಿಗೆ ಕಾದಿದೆ ಎಂದು ಏಕವಚನದಲ್ಲಿ ನಿಂದಿಸಿದ್ದರು. ಸಿ.ಟಿ.ರವಿ, ಆರ್.ಅಶೋಕ್ ಮತ್ತು ಜಗದೀಶ್ ಶೆಟ್ಟರ್ ಕೂಡ ಸಿದ್ದರಾಮಯ್ಯ ವಿರುದ್ಧ ಆರೋಪ ಮಾಡಿದ್ದರು. ಬಿಜೆಪಿ ನಾಯಕರ ಅಸಂಬದ್ಧ ಹೇಳಿಕೆಯಿಂದ ಕೆರಳಿರುವ ಕುರುಬ ಸಮುದಾಯದ ಜನತೆ ಕೂಡಲೇ ಬಿಜೆಪಿ ನಾಯಕರು ಬಹಿರಂಗ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿ, ಪ್ರತಿಭಟನೆ ನಡೆಸಿದರು.

ಕಾಳಿದಾಸ ವಿದ್ಯಾವರ್ಧಕ ಸಂಘದಿಂದ ಟೌನ್‌ಹಾಲ್‌ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಕುರುಬ ಸಮುದಾಯದ ಸಂಘಟನೆಗಳು, ಸೊಗಡು ಶಿವಣ್ಣ ಮತ್ತು ಸಿ.ಟಿ.ರವಿ ವಿರುದ್ಧ ಧಿಕ್ಕಾರ ಕೂಗಿದ್ರು. ಬಿಜೆಪಿ ಸರ್ಕಾರದಲ್ಲಿ ಟಿಕೆಟ್ ಪಡೆಯಲು ವಿಫಲರಾಗಿರುವ ಶಿವಣ್ಣ ಮೂಲೆಗುಂಪಾಗಿದ್ದಾರೆ. ಅವರನ್ನು ಮಾತನಾಡಿಸುವವರೇ ಇಲ್ಲ. ತನ್ನ ಅಸ್ತಿತ್ವ ಉಳಿಸಿಕೊಳ್ಳಲು ಹೆಣಗುತ್ತಿರುವ ಶಿವಣ್ಣ, ಈ ರೀತಿಯ ಹೇಳಿಕೆ ನೀಡುತ್ತಿದ್ದಾರೆ ಎಂದು ದೂರಿದರು.

ಬಿಜೆಪಿ ಸರ್ಕಾರದ ಸಚಿವರು, ನೆರೆ ಸಂತ್ರಸ್ತರ ನೋವು-ಸಂಕಟಗಳನ್ನು ಆಲಿಸುವ ಬದಲು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ವಿರುದ್ಧ ಅನಗತ್ಯ ಟೀಕೆ ಮಾಡುತ್ತಿದ್ದಾರೆ. ರಾಜ್ಯದ ಜನರ ಕಷ್ಟಗಳನ್ನು ಆಲಿಸದ ಸರ್ಕಾರದ ವಿರುದ್ಧ ಜನತೆ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಸಿ.ಟಿ.ರವಿ ಮತ್ತು ಸೊಗಡು ಶಿವಣ್ಣ ಸೇರಿದಂತೆ ಬಿಜೆಪಿ ನಾಯಕರು, ಸಂಕಷ್ಟದಲ್ಲಿರುವ ಜನತೆಯ ನೆರವಿಗೆ ಬರುವುದನ್ನು ಬಿಟ್ಟು ಅನಗತ್ಯ ಕಾಲಹರಣ ಮಾಡುತ್ತಿದ್ದಾರೆ ಎಂದು ಟೀಕಿಸಿದರು.

ಸಿದ್ದರಾಮಯ್ಯ ಅವರನ್ನು ದೇಶದ್ರೋಹಿ ಎಂದು ಕರೆದಿರುವ ಬಿಜೆಪಿ ಮುಖಂಡರು ಕೂಡಲೇ ಬಹಿರಂಗ ಕ್ಷಮೆ ಯಾಚಿಸದಿದ್ದರೆ ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದರು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಹಿಳೆಯ ಕೊಲೆಗೆ ರಾಜಕೀಯ ಬಣ್ಣ ಬಳಿದ ಅಣ್ಣಾಮಲೈ: ಪ್ರಕರಣ ದಾಖಲು

0
ಮಹಿಳೆಯೋರ್ವರ ಸಾವಿಗೆ ಸಂಬಂಧಿಸಿ ಸಾಮಾಜಿಕ ಮಾಧ್ಯಮದಲ್ಲಿ ಸುಳ್ಳು ಮಾಹಿತಿ ಪೋಸ್ಟ್ ಮಾಡಿದ ಆರೋಪದ ಮೇಲೆ ಬಿಜೆಪಿಯ ತಮಿಳುನಾಡು ರಾಜ್ಯ ಘಟಕದ ಮುಖ್ಯಸ್ಥ ಕೆ ಅಣ್ಣಾಮಲೈ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ತಮಿಳುನಾಡಿನ ಕಡಲೂರು ಜಿಲ್ಲೆಯ ಪಕ್ಕಿರಿಮಣಿಯಂ...