Homeಕರ್ನಾಟಕಸುಪ್ರೀಂ ತೀರ್ಪು ಬೆನ್ನಲ್ಲೇ ಅನರ್ಹ ಶಾಸಕರ ಜೊತೆಗೆ ಸಭೆಗೆ ಮುಂದಾದ ಸಿಎಂ ಯಡಿಯೂರಪ್ಪ

ಸುಪ್ರೀಂ ತೀರ್ಪು ಬೆನ್ನಲ್ಲೇ ಅನರ್ಹ ಶಾಸಕರ ಜೊತೆಗೆ ಸಭೆಗೆ ಮುಂದಾದ ಸಿಎಂ ಯಡಿಯೂರಪ್ಪ

- Advertisement -
- Advertisement -

17 ಶಾಸಕರನ್ನು ಅನರ್ಹಗೊಳಿಸಿದ್ದ ಮಾಜಿ ರಮೇಶ್‌ ಕುಮಾರ್‌ ರವರ ತೀರ್ಪನ್ನು ಎತ್ತಿಹಿಡಿದ ಸುಪ್ರೀಂ ಜೊತೆಗೆ ಅನರ್ಹರಿಗೆ ಉಪಚುನಾವಣೆಯಲ್ಲಿ ಸ್ಪರ್ಧಿಸಲು ಸಹ ಅವಕಾಶ ನೀಡಿದೆ. ಈ  ಹಿನ್ನೆಲೆಯಲ್ಲಿ ಮುಂದಿನ ನಡೆಗಳ ಕುರಿತು ಚರ್ಚಿಸಲು ಅನರ್ಹ ಶಾಸಕರೊಂದಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಮುಂದಾಗಿದ್ದಾರೆ.

ತೀರ್ಪು ಪ್ರಕಟವಾಗುತ್ತಲೇ ಹರ್ಷ ವ್ಯಕ್ತಪಡಿಸಿರುವ ಬಿಎಸ್‌ವೈ ನಗುಮುಖದಲ್ಲೇ ಮುಂದಿನ ನಡೆಯತ್ತ ಗಮನಹರಿಸಿದ್ದಾರೆ. ಕೂಡಲೇ ಎಲ್ಲಾ ಅನರ್ಹ ಶಾಸಕರಿಗೂ ಸಭೆಗೆ ಬುಲಾವ್‌ ನೀಡಿದ್ದಾರೆ.

ಅನರ್ಹ ಶಾಸಕರು ಉಪಚುನಾವಣೆಯಲ್ಲಿ ಗೆಲ್ಲುವವರೆಗೂ ಮಂತ್ರಿಯಾಗುವಂತಿಲ್ಲ ಮತ್ತು ಯಾವುದೇ ಸರ್ಕಾರಿ ಹುದ್ದೆ ಹೊಂದುವಂತಿಲ್ಲ ಎಂದು ಸುಪ್ರೀಂ ಹೇಳಿದೆ. ಇದರ ಕುರಿತು ಮತ್ತು ಟಿಕೆಟ್ ಹಂಚಿಕೆಯ ಕುರಿತು ಮಹತ್ವದ ಚರ್ಚೆಗಳು ಯಡಿಯೂರಪ್ಪನವರ ಸಭೆಯಲ್ಲಿ ನಡೆಯುತ್ತವೆ ಎನ್ನಲಾಗಿದೆ.

ಇನ್ನು ಡಾ.ಸುಧಾಕರ್‌, ಗೋಪಾಲಯ್ಯ, ಎಚ್‌ ವಿಶ್ವನಾಥ್‌, ಪ್ರತಾಪ್‌ಗೌಡ ಪಾಟೀಲ್ ಮುಂತಾದ ಅನರ್ಹ ಶಾಸಕರು ಭಾರೀ ಖುಷಿಯಲ್ಲಿದ್ದಾರೆ. ಉಪಚುನಾವಣೆಯಲ್ಲಿ ಗೆದ್ದೆ ಗೆಲ್ಲುತ್ತೇವೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕೋವಿಡ್ ಭ್ರಷ್ಟ ಸುಧಾಕರ್ ಪರವಾಗಿ ಮತ ಕೇಳಲು ಪ್ರಧಾನಿ ಮೋದಿ ಚಿಕ್ಕಬಳ್ಳಾಪುರಕ್ಕೆ ಬರುತ್ತಿದ್ದಾರೆ :...

0
ಪ್ರಧಾನಿ ಮೋದಿಯವರು ಹತ್ತು ವರ್ಷದಲ್ಲಿ ಕೊಟ್ಟ ಒಂದೂ ಆಶ್ವಾಸನೆಯನ್ನೂ ಈಡೇರಿಸದೆ ಭಾರತೀಯರ ನಂಬಿಕೆಗಳಿಗೆ ದ್ರೋಹ ಬಗೆದಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಾಗೇಪಲ್ಲಿಯಲ್ಲಿ ನಡೆದ ಪ್ರಜಾಧ್ವನಿ-2 ಬೃಹತ್ ಜನ ಸಮಾವೇಶದಲ್ಲಿ...