Homeಮುಖಪುಟಇಂದು ಕೇಂದ್ರದಲ್ಲಿ ಅಧಿಕಾರದಲ್ಲಿರುವವರೆ ನಿಜವಾದ ‘ತುಕ್ಡೆ ತುಕ್ಡೆ ಗ್ಯಾಂಗ್’: ಪಿ.ಚಿದಂಬರಂ

ಇಂದು ಕೇಂದ್ರದಲ್ಲಿ ಅಧಿಕಾರದಲ್ಲಿರುವವರೆ ನಿಜವಾದ ‘ತುಕ್ಡೆ ತುಕ್ಡೆ ಗ್ಯಾಂಗ್’: ಪಿ.ಚಿದಂಬರಂ

- Advertisement -
- Advertisement -

ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ದೇಶ ಭಾರತವು ಜಾಗತಿಕ ಪ್ರಜಾಪ್ರಭುತ್ವ ಸೂಚ್ಯಂಕ ಶ್ರೇಯಾಂಕದಲ್ಲಿ 10 ಸ್ಥಾನಗಳನ್ನು ಕುಸಿದಿರುವುದನ್ನು ಉಲ್ಲೇಖಿಸಿರುವ ಮಾಜಿ ವಿತ್ತ ಸಚಿವ ಪಿ.ಚಿದಂಬರಂ, ಇಂದು ಕೇಂದ್ರದಲ್ಲಿ ಅಧಿಕಾರದಲ್ಲಿರುವವರೆ ನಿಜವಾದ ‘ತುಕ್ಡೆ ತುಕ್ಡೆ ಗ್ಯಾಂಗ್’ ಎಂದು ಆರೋಪಿಸಿದ್ದಾರೆ.

ಆಡಳಿತಾರೂಢ ಬಿಜೆಪಿ ನೇತೃತ್ವದ ಸರ್ಕಾರವು ಪ್ರಜಾಪ್ರಭುತ್ವ ಸಂಸ್ಥೆಗಳನ್ನು ದುರ್ಬಲಗೊಳಿಸುತ್ತಿದೆ ಮತ್ತು ಪ್ರಜಾಪ್ರಭುತ್ವವನ್ನು ಸವೆಸುತ್ತಿದೆ ಎಂದು ಅವರು ಸರಣಿ ಟ್ವೀಟ್‌ಗಳನ್ನು ಮಾಡಿದ್ದಾರೆ.

ಕಳೆದ ಎರಡು ವರ್ಷಗಳ ಘಟನೆಗಳನ್ನು ಸೂಕ್ಷ್ಮವಾಗಿ ಗಮನಿಸಿದ ಯಾರಿಗಾದರೂ ಪ್ರಜಾಪ್ರಭುತ್ವವು ಸವೆದುಹೋಗಿದೆ ಮತ್ತು ಪ್ರಜಾಪ್ರಭುತ್ವ ಸಂಸ್ಥೆಗಳು ದುರ್ಬಲಗೊಂಡಿವೆ ಎಂಬುದು ತಿಳಿಯುತ್ತದೆ, ಅಧಿಕಾರದಲ್ಲಿರುವವರು ನಿಜವಾದ ‘ತುಕ್ಡೆ ತುಕ್ಡೆ’ ಗ್ಯಾಂಗ್ ಎಂದು ಅವರು ಆರೋಪಿಸಿದ್ದಾರೆ.

ದಿ ಎಕನಾಮಿಸ್ಟ್ ಗ್ರೂಪ್‌ನ ಸಂಶೋಧನೆ ಮತ್ತು ವಿಶ್ಲೇಷಣಾ ವಿಭಾಗವಾದ ದಿ ಎಕನಾಮಿಸ್ಟ್ ಇಂಟೆಲಿಜೆನ್ಸ್ ಯುನಿಟ್ ಸಿದ್ಧಪಡಿಸಿದ ಡೆಮಾಕ್ರಸಿ ಇಂಡೆಕ್ಸ್‌ನಲ್ಲಿ 160 ಕ್ಕೂ ಹೆಚ್ಚು ದೇಶಗಳಲ್ಲಿ ಪ್ರಜಾಪ್ರಭುತ್ವದ ಸ್ಥಿತಿಯ ಬಗ್ಗೆ ವರದಿ ಮುಂದಿಟ್ಟಿದ್ದು ಭಾರತವು 10 ಸ್ಥಾನ ಕುಸಿಯುವುದರೊಂದಿಗೆ ಸದ್ಯ 51 ನೇ ಸ್ಥಾನದಲ್ಲಿದೆ.

ಪ್ರಜಾಪ್ರಭುತ್ವ ಸೂಚ್ಯಂಕವು ಜಮ್ಮು ಮತ್ತು ಕಾಶ್ಮೀರದಲ್ಲಿ 370ನೇ ವಿಧಿಯ ರದ್ದತಿ ಮತ್ತು ಅಸ್ಸಾಂನಲ್ಲಿನ ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಆರ್‌ಸಿ) ಯ ವಿವಾದಾತ್ಮಕ ಅನುಷ್ಠಾನವನ್ನು ಉಲ್ಲೇಖಿಸಿದೆ. ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವವಾದ ಭಾರತದಲ್ಲಿ “ಪ್ರಜಾಪ್ರಭುತ್ವ ಹಿಂಜರಿತ” ಎಂದು ವಿವರಿಸಲಾಗಿದೆ.

ತುಕ್ಡೆ ತುಕ್ಡೆ ಗ್ಯಾಂಗ್ ಎನ್ನುವುದು ಆಡುಮಾತಿನ ಪದವಾಗಿದ್ದು, ಇದನ್ನು ಬಲಪಂಥೀಯ ಪಕ್ಷಗಳು ಎಡ-ಬೆಂಬಲಿತ ಗುಂಪುಗಳು ಮತ್ತು ಅವರ ಬೆಂಬಲಿಗರ ಮೇಲೆ ಆಕ್ರಮಣ ಮಾಡಲು ಬಳಸುತ್ತಾರೆ. ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದಲ್ಲಿ ಫೆಬ್ರವರಿ 2016ರ ಪ್ರತಿಭಟನೆಯ ನಂತರ ಬಿಜೆಪಿ ನಾಯಕರು ಈ ಪದವನ್ನು ಬಳಸಿದ್ದಾರೆ.

ಸಂಕೇತ್ ಗೋಖಲೆ ಎಂಬುವವರು ಮಾಹಿತಿ ಹಕ್ಕು ಕಾಯ್ದೆಯಡಿ ಕೇಳಿದ ಪ್ರಶ್ನೆಯೊಂದಕ್ಕೆ ತುಕ್ಡೆ-ತುಕ್ಡೆ ಗ್ಯಾಂಗ್ ಬಗ್ಗೆ ಯಾವುದೇ ಮಾಹಿತಿ ಇಲ್ಲ ಎಂದು ಕೇಂದ್ರ ಗೃಹ ಸಚಿವಾಲಯ ಪ್ರತಿಕ್ರಿಯಿಸಿದೆ. ಇದನ್ನು ಸ್ವತಃ ಸಂಕೇತ್‌ ಗೋಖಲೆ ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿದ್ದರು. ಅದಕ್ಕೆ ಪ್ರತಿಕ್ರಿಯಿಸಿದ್ದ ಕಾಂಗ್ರೆಸ್‌ ಮುಖಂಡ ಶಶಿ ತರೂರ್‌, “ತುಕ್ಡೆ-ತುಕ್ಡೆ ಗ್ಯಾಂಗ್ ಇಂದಿಗೂ ಅಸ್ತಿತ್ವದಲ್ಲಿದೆ, ಅದು ಪ್ರಸ್ತುತ ಸರ್ಕಾರವಾಗಿದೆ” ಎಂದು ನಿನ್ನೆ ಹೇಳಿದ್ದರು.

 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಚಾಮರಾಜನಗರ: ರೈತ ಮುಖಂಡರ ಮೇಲೆ ಬಿಜೆಪಿಗರಿಂದ ಹಲ್ಲೆ

0
ರೈತ ಮುಖಂಡರ ಮೇಲೆ ಬಿಜೆಪಿ ಕಾರ್ಯಕರ್ತರು ಹಲ್ಲೆ ನಡೆಸಿ ಬೆದರಿಕೆ ಹಾಕಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಬಿಜೆಪಿ ಗುಂಡಾಗಳು ಅವಾಚ್ಯವಾಗಿ ನಿಂದಿಸಿ ತಳ್ಳಾಟ ನಡೆಸಿದ್ದಾರೆ, ರೈತರ ಸ್ವಾಭಿಮಾನವಾದ ಹಸಿರು ಟವಲನ್ನು ಕಿತ್ತು ಅವಮಾನಿಸಿದ್ದಾರೆ...