Homeಮುಖಪುಟಸಿಎಎಯಿಂದ ಹಿಂದೆ ಸರಿಯುವ ಮಾತೇ ಇಲ್ಲ: ಪ್ರಧಾನಿ ಮೋದಿ

ಸಿಎಎಯಿಂದ ಹಿಂದೆ ಸರಿಯುವ ಮಾತೇ ಇಲ್ಲ: ಪ್ರಧಾನಿ ಮೋದಿ

- Advertisement -
- Advertisement -

ಪೌರತ್ವ ತಿದ್ದುಪಡಿ ಕಾಯ್ದೆ, ಪೌರತ್ವ ನೋಂದಣಿ ಕಾಯ್ದೆ ವಿರುದ್ಧ ಎಷ್ಟೇ ಪ್ರತಿಭಟನೆಗಳು ನಡೆಸಿದರೂ ಕೇಂದ್ರ ಸರ್ಕಾರ ತೆಗೆದುಕೊಂಡಿರುವ ತೀರ್ಮಾನದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಖಡಕ್ಕಾಗಿ ಹೇಳಿದ್ದಾರೆ.

ಉತ್ತರ ಪ್ರದೇಶದ ತಮ್ಮ ಕ್ಷೇತ್ರವಾದ ವಾರಣಾಸಿಯಲ್ಲಿ ನಡೆದ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಎಲ್ಲಾ ಒತ್ತಡಗಳ ಹೊರತಾಗಿಯೂ ಸರ್ಕಾರದ ತೀರ್ಮನಕ್ಕೆ ಬದ್ದವಾಗಿದ್ದೇವೆ ಎಂದು ತಿಳಿಸಿದರು.

ರಾಷ್ಟ್ರದ ಹಿತಕ್ಕಾಗಿ 370 ವಿಧಿ ರದ್ದುಪಡಿಸುವ ತೀರ್ಮಾನ ಮಾಡಿದ್ದು ಮತ್ತು ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೊಳಿಸುವ  ತೀರ್ಮಾನ ಮಾಡಿದ್ದು ಅವಶ್ಯಕವಾಗಿದೆ ಎಂದು ಪ್ರತಿಪಾದಿಸಿದರು. ದಿನವಿಡೀ ವಾರಣಾಸಿ ಲೋಕಸಭಾ ಕ್ಷೇತ್ರದ ಹಲವು ಪ್ರದೇಶಗಳಿಗೆ ಭೇಟಿ ನೀಡಿದ ಮೋದಿ 1254 ಕೋಟಿ ರೂಪಾಯಿ ವೆಚ್ಚದ 50 ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು.

ಆರ್.ಎಸ್.ಎಸ್. ಮುಖಂಡ ದೀನ್ ದಯಾಳ್ ಉಪಾಧ್ಯಾಯ ಅವರ 64 ಅಡಿ ಎತ್ತರದ ಪ್ರತಿಮೆಯನ್ನು ಇದೇ ವೇಳೆ ಲೋಕಾರ್ಪಣೆಗೊಳಿಸಿದರು.

ಕಾಂಗ್ರೆಸ್ ಸೇರಿದಂತೆ ಪ್ರತಿಪಕ್ಷಗಳು ಸಿಎಎ, ಎನ್ಆರ್.ಸಿ ಮತ್ತು ಎನ್.ಪಿ.ಆರ್ ವಿರುದ್ದ ಪ್ರತಿಭಟನೆಗೆ ಕುಮ್ಮಕ್ಕು ನೀಡುತ್ತಿದ್ದು ಓಟ್ ಬ್ಯಾಂಕ್ ರಾಜಕಾರಣ ಮಾಡುತ್ತಿವೆ ಎಂದು ವಾಗ್ದಾಳಿ ನಡೆಸಿದರು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

3 COMMENTS

  1. 2 ನೇ ಜಾಲಿಯನ್ವಾಬಾಗ್ ನಡೆದರೂ ಸರಿಯೇ – ನಾವು ಹಿಂದೆ ಸರಿಯುವುದು ಕನಸಿನ ಮಾತು – ನಿಮ್ಮ ದೋಸ್ತಿ B R Shetty ಗೆ ಈ ಮಾತು ಹೇಳಿ

LEAVE A REPLY

Please enter your comment!
Please enter your name here

- Advertisment -

Must Read

ಮೋದಿ ದ್ವೇಷ ಭಾಷಣದ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದ ಬಿಜೆಪಿ ಜಿಲ್ಲಾಧ್ಯಕ್ಷ ಪಕ್ಷದಿಂದಲೇ ಉಚ್ಚಾಟನೆ!

0
ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮರ ವಿರುದ್ಧ ಮಾಡಿರುವ ದ್ವೇಷ ಭಾಷಣದ ಬಗ್ಗೆ ಮಾಧ್ಯಮವೊಂದರಲ್ಲಿ ತನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದಕ್ಕೆ ರಾಜಸ್ಥಾನದ ಬಿಕಾನೇರ್ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾಧ್ಯಕ್ಷನನ್ನು ಪಕ್ಷದಿಂದಲೇ ಉಚ್ಚಾಟಿಸಲಾಗಿದೆ. ಈ ವಿಚಾರ ಈಗ...